Wednesday, 9th October 2024

ರಾಜ್ಯಸಭೆ ಚುನಾವಣೆ ಗೆಲುವು: ಬೊಮ್ಮಾಯಿಯನ್ನು ಅಭಿನಂದಿಸಿದ ಹೈಕಮಾಂಡ್

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಮೂರು ಬಿಜೆಪಿ ಅಭ್ಯರ್ಥಿಗಳು ಗೆದ್ದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದರು.

ಮೂವರು ಅಭ್ಯರ್ಥಿಗಳು ಗೆದ್ದಿರುವುದಕ್ಕೆ ಸಂತಸ ವ್ಯಕ್ತಪಡಿಸಿ ಅಲ್ಪ ಮತಗಳ ಕೊರತೆ ಇದ್ದರೂ ತಾಂತ್ರಿಕವಾಗಿ ಮೂವರು ಬಿಜೆಪಿ ಅಭ್ಯರ್ಥಿಗಳು ಗೆಲ್ಲುವಂತೆ ನೋಡಿಕೊಂಡಿ ರುವುದಕ್ಕಾಗಿ ಶುಭಾಶಯ ಕೋರಿದರು. ರಾಜ್ಯಸಭೆಯಲ್ಲಿ ಬಿಜೆಪಿ ಸಂಖ್ಯಾಬಲ ಹೆಚ್ಚಳಕ್ಕೆ ಕರ್ನಾಟಕದ ಕೊಡುಗೆ ಇದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

 

ಪಟ್ಟ ಶ್ರಮ ಇಂದು ಸಾರ್ಥಕವಾಗಿದೆ ಎಲ್ಲ ತಂತ್ರಗಳು ಫಲಿಸಿವೆ ಎಂದು ನಡ್ಡಾ ಸಿಎಂ ಗೆ ಪ್ರಶಂಸಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.