ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯವಾಗಿದ್ದು, ನಾಮಪತ್ರ ವಾಪಸ್ ಪಡೆಯಲು ಏ.24 ಕೊನೆಯ ದಿನವಾಗಿದೆ.
ಏ.21 ರ ಇಂದು ಚುನಾವಣಾ ಅಧಿಕಾರಿಗಳು ನಾಮಪತ್ರಕೆಗಳನ್ನು ಪರಿಶೀಲನೆ ಮಾಡಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕನಕಪುರ ಕ್ಷೇತ್ರ ದಿಂದ ಸ್ಪರ್ಧಿಸುತ್ತಿದ್ದು, ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಈ ನಾಮಪತ್ರ ತಿರಸ್ಕೃತವಾಗುವ ಆತಂಕದಲ್ಲಿದ್ದು, ಡಿಕೆ ಶಿವಕುಮಾರ್ ಅವರ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ.
ಡಿ.ಕೆ ಶಿವಕುಮಾರ್ ಅವರು ತಮ್ಮ ನಾಮಪತ್ರ ತಿರಸ್ಕೃತವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುರುವಾರ ಸಹೋದರ ಸಂಸದ ಡಿ.ಕೆ ಸುರೇಶ್ ಅವರಿಂದಲೂ ನಾಮಪತ್ರ ಹಾಕಿಸಿದ್ದಾರೆ.
ಇಂದು ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.