Sunday, 15th December 2024

ಈದ್ಗಾ ಮೈದಾನದ ಮಾಲೀಕತ್ವ: ಇಂದು ವಿಚಾರಣೆ

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದ ಮಾಲೀಕತ್ವ ವಿಚಾರ ಹೈಕೋರ್ಟ್ ಮೆಟ್ಟಿಲೇರಿದೆ.

ರಾಜಕೀಯ ಮತ್ತು ಧಾರ್ಮಿಕ ಸ್ವರೂಪದ ಪಡೆದಿರುವ ಈ ವಿವಾದದ ಬಗ್ಗೆ ಗುರುವಾರ ಹೈಕೋರ್ಟ್ ವಿಚಾರಣೆ ಕೈಗೆತ್ತಿಕೊಳ್ಳಲಿದೆ.

ರಾಜ್ಯ ವಕ್ಫ್ ಮಂಡಳಿ ‌ಚಾಮರಾಜಪೇಟೆಯ ಆಟದ ಮೈದಾನದ ಮಾಲೀಕತ್ವವು ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ ಪಶ್ಚಿಮ ವಲಯ ಜಂಟಿ ಆಯುಕ್ತ ಶ್ರೀನಿವಾಸ್ ಆ.6ರಂದು ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ‌ ಸಲ್ಲಿಸಿದೆ.

ಅರ್ಜಿದಾರರ ಪರ ವಕೀಲರು, ಬುಧವಾರ ನ್ಯಾ.ಹೇಮಂತ್ ಚಂದನ್ ಗೌಡರ್ ಅವರಿದ್ದ ಏಕಸದಸ್ಯಪೀಠದ ಮುಂದೆ ವಿಚಾರಣೆಗೆ ಬಂದಿತು. ಅರ್ಜಿಯಲ್ಲಿ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಯನ್ನು ಪ್ರತಿವಾದಿ ಮಾಡಲಾಗಿದೆ.

ಅರ್ಜಿ ಕುರಿತು ಉತ್ತರಿಸಲು ಸರ್ಕಾರ ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಗುರುವಾರ ಮಧ್ಯಾಹ್ನಕ್ಕೆ ನಿಗದಿಪಡಿಸಿದೆ.