Saturday, 27th April 2024

ನೂತನ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜಭವನ ಚಲೋ: ರೈತರು ಪೊಲೀಸರ ವಶಕ್ಕೆ

ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದ ರೈತರು ಶನಿವಾರ ರಾಜಭವನ ಚಲೋ ನಡೆಸಿದ್ದು, ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ರೈತರನ್ನು ತಡೆದು ವಶಕ್ಕೆ ಪಡೆದರು.

ಕೇಂದ್ರ ಸರ್ಕಾರ ನೂತನ ಕೃಷಿ ಕಾಯ್ದೆಯನ್ನು ಹಿಂತೆಗೆದುಕೊಳ್ಳುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂದು ಪ್ರತಿಭಟನಾ ನಿರತ ರೈತರು ಪಟ್ಟು ಹಿಡಿದಿದ್ದಾರೆ.

ತಮ್ಮ ರಾಜಭವನ ಚಲೋ ಬಗ್ಗೆ ಮಾತನಾಡಿದ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್, ಕೇಂದ್ರ ಸರ್ಕಾರ ನೂತನ ಕೃಷಿ ಕಾಯ್ದೆಯನ್ನು ಹಿಂಪಡೆಯಬೇಕು ಮತ್ತು ರೈತರ ಬೆಳೆಗಳಿಗೆ ಶಾಸನಾತ್ಮಕ ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸಬೇಕೆಂದು ದೆಹಲಿ ಗಡಿಭಾಗದಲ್ಲಿ ರೈತರು ಹೋರಾಟ ನಡೆಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ಹೋರಾಟದ ಬಗ್ಗೆ ನಿರ್ಲಕ್ಷ್ಯ ವಹಿಸಿದಂತೆ ಕಂಡುಬರುತ್ತಿದೆ.

ಇದಕ್ಕಾಗಿ ರಾಜಭವನಕ್ಕೆ ಪ್ರತಿಭಟನೆ ಸಾಗಿ ಒತ್ತಾಯ ಪತ್ರವನ್ನು ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ನೀಡುತ್ತಿದ್ದೇವೆ. ರಾಷ್ಟ್ರಪತಿಗಳು ಕೇಂದ್ರ ಸರ್ಕಾರಕ್ಕೆ ರೈತರ ಪರವಾಗಿ ಮಸೂದೆ ತರುವಂತೆ ಒತ್ತಾಯ ಮಾಡಬೇಕೆಂದು ಮನವಿ ಮಾಡಿಕೊಳ್ಳುತ್ತಿದ್ದೇವೆ ಎಂದರು.

Leave a Reply

Your email address will not be published. Required fields are marked *

error: Content is protected !!