Saturday, 27th July 2024

ಸಾಮೂಹಿಕ ಅತ್ಯಾಚಾರ ಪ್ರಕರಣ ಭೇದಿಸಿದ ತಂಡಕ್ಕೆ ₹ 5 ಲಕ್ಷ ಬಹುಮಾನ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ‘ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಗುಡ್ಡದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಕುಮಾರಕೃಪಾ ಅತಿಥಿಗೃಹದಲ್ಲಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿ, ಇದೊಂದು ಅಮಾನವೀಯ ಕೃತ್ಯ. ಕೃತ್ಯದ ಬಳಿಕ ಸಾಕಷ್ಟು ಆತಂಕ ವ್ಯಕ್ತವಾಗಿತ್ತು. ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ₹ 5 ಲಕ್ಷ ಬಹುಮಾನ ನೀಡಲಾಗುವುದು’ ಎಂದರು.

ಇಂಥ ನೂರಾರು ಪ್ರಕರಣಗಳಲ್ಲಿ ನಮ್ಮ ಪೊಲೀಸ್‌ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದಾರೆ. ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂಬ ಸಂದೇಶವನ್ನು ಪೋಲಿಸರು ಕೊಟ್ಟಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ತಮಿಳುನಾಡಿನಿಂದ ನಿತ್ಯ ಮೈಸೂರಿಗೆ ಬಂದು ಹೋಗುತ್ತಿದ್ದರು ಎಂಬ ಮಾಹಿತಿಯೂ ಸಿಕ್ಕಿದೆ. ಸಂತ್ರಸ್ತೆಯ ಹೇಳಿಕೆ ಪಡೆಯುವ ಸಂಬಂಧ ಆಕೆಯ ಕುಟುಂಬದ ಸದಸ್ಯರನ್ನು ಮನವೊಲಿಸಲಾಗುತ್ತಿದೆ’ ಎಂದರು.

ಸಂತ್ರಸ್ತೆ ಇನ್ನೂ ಆಘಾತದಲ್ಲಿ ಇದ್ದಾರೆ. ಹೀಗಾಗಿ ಆಕೆಯಿಂದ ಹೇಳಿಕೆ ಪಡೆಯಲು ಸಾಧ್ಯವಾಗಿಲ್ಲ. ಪ್ರಕರಣ ಪೊಲೀಸ ರಿಗೆ ದೊಡ್ಡ ಸವಾಲಾಗಿತ್ತು. ತಾಂತ್ರಿಕ ನೆಲೆ ಯಲ್ಲಿ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಪೋಲಿಸರು ಯಶಸ್ವಿಯಾಗಿ ದ್ದಾರೆ’ ಎಂದರು.

‘ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಸಂಜೆ 7 ಗಂಟೆಯ ನಂತರ ಹೆಚ್ಚಿನ ಭದ್ರತೆ ಒದಗಿಸಲಾಗುವುದು. ಜನರಿಗೆ ತೊಂದರೆ ಆಗದಂತೆ ರಕ್ಷಣೆ ನೀಡಲಾಗುವುದು. ಮೈಸೂರಿಗೆ ಬರುವವರ ಸಂಖ್ಯೆ ಹೆಚ್ಚಾಗಿದೆ. ತಮಿಳುನಾಡು, ಕೇರಳದಿಂದ ಬರುವವರ ಸಂಖ್ಯೆಯೂ ಜಾಸ್ತಿ ಇದೆ. ಗಡಿ ಭಾಗದಲ್ಲಿ ಬರುವವರು, ಹೋಗುವವ ರನ್ನು ತಡೆಯಲು ಸಾಧ್ಯವಿಲ್ಲ’ ಎಂದರು.

Leave a Reply

Your email address will not be published. Required fields are marked *

error: Content is protected !!