Wednesday, 9th October 2024

ಬಾಡಿಗೆದಾರರಿಗೂ 200 ಯೂನಿಟ್ ಉಚಿತ ವಿದ್ಯುತ್

ಬೆಂಗಳೂರು : ಬಾಡಿಗೆದಾರರು ಸೇರಿ ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ (Gruha Jyoti Scheme) ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಉಚಿತ ವಿದ್ಯುತ್ ಗೊಂದಲ ವಿಚಾರಕ್ಕೆ ತೆರೆ ಎಳೆದಿದ್ದಾರೆ.

ಬಾಡಿಗೆದಾರರು ಸೇರಿ ಎಲ್ಲರಿಗೂ 200 ಯೂನಿಟ್ ಉಚಿತ ಉಚಿತ ವಿದ್ಯುತ್ ನೀಡುತ್ತೇವೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದ್ದಾರೆ.

ಗೃಹಜ್ಯೋತಿ ಯೋಜನೆಯಡಿ ಬಾಡಿಗೆದಾರರಿಗೂ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ, ಬಾಡಿಗೆ ಮನೆಗಳಲ್ಲಿ ವಾಸಿಸುವವರು ಕೂಡ ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಗೆ ಅರ್ಹರಾಗಿರುತ್ತಾರೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ.

ಬಾಡಿಗೆದಾರರಿಗೂ 200 ಯೂನಿಟ್ ವಿದ್ಯುತ್ ಉಚಿತ ನೀಡಲಾಗುತ್ತದೆ, ಬಾಡಿಗೆದಾರರು ಅರ್ಜಿ ಸಲ್ಲಿಸುವಾಗ ಸಂಪೂರ್ಣ ದಾಖಲೆಗಳನ್ನು ನೀಡಬೇಕು. ಮಾಲೀಕನ ಎಷ್ಟು ಬಾಡಿಗೆ ಮನೆ ಇದೆ ಎಂದು ಘೋಷಿಸಬೇಕು ಹಾಗೂ ಮನೆ ಮಾಲೀಕ ಕಡ್ಡಾಯವಾಗಿ ತೆರಿಗೆ ಕಟ್ಟಿರಬೇಕು. ಇಷ್ಟು ಬಾಡಿಗೆ ಮನೆಗಳಿದೆ, ಇಷ್ಟು ಮನೆಗಳಿಗೆ ಟ್ಯಾಕ್ಸ್ ಕಟ್ಟಿದ್ದೇನೆ ಎಂದು ಮಾಹಿತಿ ನೀಡಬೇಕು. ಒಂದು ವೇಳೆ ತಪ್ಪು ಮಾಹಿತಿ ನೀಡಿದ್ರೆ ಈ ಯೋಜನೆ ಅನ್ವಯ ವಾಗುವುದಿಲ್ಲ . ಎಷ್ಟು ವರ್ಷಗಳಿಂದ ಬಾಡಿಗೆ ಕಟ್ಟುತ್ತಿದ್ದೇವೆ. ವಿದ್ಯುತ್ ಬಿಲ್, ಮನೆ ಬಾಡಿಗೆ, ಕರಾರು ಪತ್ರವಿರಬೇಕು. ಎಷ್ಟು ಮನೆ ಇದೆ ಎಂದು ಘೋಷಿಸಿರಬೇಕು. ಬಾಡಿಗೆಗಾರರಿಗೆ ಉಚಿತ ವಿದ್ಯುತ್ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯ ಸರ್ಕಾರದಿಂದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ.