Sunday, 15th December 2024

ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ವಿಧಿವಶ

ಬೆಂಗಳೂರು: ಮುಖ್ಯ ಮಂತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ವಿಧಿವಶರಾಗಿದ್ದಾರೆ.

ಸೋಮವಾರ ಬೆಳಿಗ್ಗೆ ಜಿಮ್ ನಲ್ಲಿ ವರ್ಕೌಟ್ ಮಾಡಿದ ಬಳಿಕ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎನ್ನಲಾಗಿದೆ. ಇದೇ ವೇಳೆ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಗುರುಲಿಂಗ ಸ್ವಾಮಿ ಹೋಳಿಮಠ ಅವರು ಮುಖ್ಯಮಂತ್ರಿ ಮಾಧ್ಯಮ ಸಂಯೋಜಕಯಾಗಿ ಕೆಲಸ ಮಾಡುತ್ತಿದ್ದರು. ಇದಲ್ಲದೇ ಕನ್ನಡದ ಅನೇಕ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದರು, ಇವರ ಆಕಾಲಿಕ ನಿಧನಕ್ಕೆ ಕನ್ನಡ ಮಾಧ್ಯಮದ ಪತ್ರಕರ್ತರು ಕಂಬನಿ ಮಿಡಿದಿದ್ದಾರೆ.