Wednesday, 9th October 2024

ಚಿನ್ನದ ದರದಲ್ಲಿ 100 ರೂ. ಏರಿಕೆ

ಬೆಂಗಳೂರು: ಬಂಗಾರದ ದರದಲ್ಲಿ ಶುಕ್ರವಾರ 100 ರೂ. ಏರಿಕೆಯಾಗಿದೆ. 24 ಕ್ಯಾರಟ್‌ನ 10 ಗ್ರಾಮ್‌ ಚಿನ್ನದ ದರ ಬೆಂಗಳೂರಿನಲ್ಲಿ 58,850 ರೂ.ನಷ್ಟಿತ್ತು. 22 ಕ್ಯಾರೆಟ್‌ ಬಂಗಾರದ ದರ ಕೂಡ 100 ರೂ. ಏರಿದ್ದು, 53,950 ರೂ. ಇತ್ತು.

Read E-Paper click here

ಭಾರತದಲ್ಲಿ ಮದುವೆ ಹಾಗೂ ಹಬ್ಬಗಳ ಸಂದರ್ಭ ಚಿನ್ನದ ಖರೀದಿ ಹೆಚ್ಚು.ಮಾರುಕಟ್ಟೆಯಲ್ಲಿ ಅರ್ಧದಷ್ಟು ಪಾಲನ್ನು ವಧುವಿನ ಆಭರಣಗಳು ಮತ್ತು ಹಬ್ಬಗಳ ಸಂದರ್ಭ ಕೊಳ್ಳುವ ಒಡವೆಗಳೇ ವಹಿಸುತ್ತಿವೆ. ಹೀಗಿದ್ದರೂ ಮುಂಬರುವ ವರ್ಷಗಳಲ್ಲಿ ಶಾಪಿಂಗ್‌ ಗಣನೀಯ ಹೆಚ್ಚಲಿದೆ ಎನ್ನಲು ಕಾರಣಗಳನ್ನು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ಮುಂದಿಟ್ಟಿದೆ.

ಭಾರತದಿಂದ ಇತ್ತೀಚಿನ ವರ್ಷಗಳಲ್ಲಿ ಜ್ಯುವೆಲ್ಲರಿ ರಫ್ತು ಕೂಡ ಗಣನೀಯ ಏರಿಕೆಯಾಗುತ್ತಿದೆ. 2015ರಲ್ಲಿ 7.6 ಶತಕೋಟಿ ಡಾಲರ್‌ನಷ್ಟಿದ್ದ ಜ್ಯುವೆಲ್ಲರಿ ರಫ್ತು 2020ರಲ್ಲಿ ಕೋವಿಡ್-‌19 ಬರುವುದಕ್ಕೆ ಮುನ್ನ ೧೨.೪ ಶತಕೋಟಿ ಡಾಲರ್‌ಗೆ ಏರಿಕೆಯಾಗಿತ್ತು.