Monday, 13th May 2024

ಭಾರತದಲ್ಲೇ ಅತ್ಯಂತ ಕೊಳಕು ಭಾಷೆ ಎಂದರೆ ಕನ್ನಡ ಅಂತೆ ?: ಗೂಗಲ್‌ ಟೀಕೆಗೆ ತುತ್ತು

ಬೆಂಗಳೂರು: ಕನ್ನಡಿಗರು ಮಾತನಾಡುವ ಹಾಗೂ 2 ಸಾವಿರ ವರ್ಷಗಳ ಇತಿಹಾಸದ ಹಿನ್ನೆಲೆಯುಳ್ಳ ಸುಂದರ ಕನ್ನಡ ಭಾಷೆಗೆ ಮಸಿ ಬಳಿಯುವ ಕೆಲಸ ಗೂಗಲ್‌ನಿಂದ ನಡೆದಿದೆ.

ಗೂಗಲ್​ನ ಸರ್ಚ್ ಎಂಜಿನ್‌ನಲ್ಲಿ ಭಾರತದಲ್ಲೇ ಅತ್ಯಂತ ಕೊಳಕು ಭಾಷೆ ಯಾವುದು ಎಂದು ಹುಡುಕಿದರೆ ಕನ್ನಡ ಎಂಬ ಉತ್ತರ ಬರುತ್ತಿದೆ. ಆ ಮೂಲಕ ಕನ್ನಡ ಭಾಷೆಗೆ, ಕನ್ನಡಿಗರಿಗೆ ಅವಮಾನ ಮಾಡಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದು, ಅನವಶ್ಯಕವಾಗಿ ಕನ್ನಡಿಗರ ಬಗ್ಗೆ ಕೀಳರಿಮೆ ಬಿಂಬಿಸುವ ಗೂಗಲ್ ಯತ್ನದ ವಿರುದ್ಧ ಧ್ವನಿ ಎತ್ತ ಲಾಗುತ್ತಿದೆ.

ಕನ್ನಡ ಭಾಷೆಯ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಈ ಕೂಡಲೇ ಪ್ರಮಾದ ವನ್ನು ಸರಿಪಡಿಸಬೇಕು ಎಂದು ಕನ್ನಡಿಗರು ಒತ್ತಾಯಿಸುತ್ತಿದ್ದಾರೆ.

ಟಿ.ಎಸ್ ನಾಗಾಭರಣ ಪ್ರತಿಕ್ರಿಯೆ

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ ಮಾತನಾಡಿ, “ನಾವು ಈ ವಿಚಾರವಾಗಿ ಕಾನೂನು ಹೋರಾಟಕ್ಕೆ ಇಳಿದಿದ್ದೇವೆ. ಗೂಗಲ್​ನಲ್ಲಿ ಕನ್ನಡವನ್ನು ಅವಮಾನಿಸಿದ್ದನ್ನು ಖಂಡಿಸಿ ಲೀಗಲ್​ ನೋಟಿಸ್ ಕಳುಹಿಸಿದ್ದೇವೆ. ನೆಲ, ಜಲ, ಭಾಷೆ, ಸಂಸ್ಕೃತಿಯ ವಿಚಾರದಲ್ಲಿ ಇನ್ನೊಬ್ಬರನ್ನು ಅಪಮಾನ ಮಾಡುವುದನ್ನು ಸಹಿಸಲಾಗದು. ಇದೊಂದು ಬಗೆಯ ವ್ಯವಸ್ಥಿತ ಸಂಚು ಎನ್ನುವುದು ಸ್ಪಷ್ಟವಾಗಿದೆ” ಎಂದರು.

ಇದಕ್ಕೆ ಪ್ರತಿರೋಧ ಒಡ್ಡುವುದಷ್ಟೇ ನಮ್ಮ ಕೆಲಸ ಅಲ್ಲ. ನಮ್ಮತನಕ್ಕೆ ಧಕ್ಕೆಯಾಗುವ ಸಣ್ಣ ವಿಚಾರವನ್ನೂ ಸಹಿಸುವುದಿಲ್ಲ ಎನ್ನುವುದನ್ನು ಕನ್ನಡಿಗರು ಗಟ್ಟಿ ಧ್ವನಿಯಲ್ಲಿ ಹೇಳಬೇಕು ಎಂದು ಟಿ.ಎಸ್ ನಾಗಾಭರಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!