Sunday, 15th December 2024

ಗೃಹಜ್ಯೋತಿ ಯೋಜನೆ: ಅರ್ಜಿ ಸಲ್ಲಿಕೆಗೆ ಜು.27 ಕಡೆಯ ದಿನ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳಲ್ಲಿ ಒಂದು ‘ಗೃಹಜ್ಯೋತಿ’ ಯೋಜನೆಗೆ ಫಲಾನುಭವಿಯಾಗಲು ಅರ್ಜಿಗಳನ್ನು ಸಲ್ಲಿಕೆ ಮಾಡುತ್ತಿದ್ದಾರೆ. ಸರ್ಕಾರ ಯೋಜನೆ ಫಲಾನುಭವಿಯಾಗಲು ನೋಂದಣಿ ಮಾಡಲು ಗಡುವು ನೀಡಿದೆ.

ಇಂಧನ ಸಚಿವ ಕೆ. ಜೆ. ಜಾರ್ಜ್ ಮಾತನಾಡಿ, “ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿ ಸಲು ಈ ಮೊದಲು ಕಡೆಯ ದಿನಾಂಕವನ್ನು ನಿಗದಿಪಡಿಸಿರಲಿಲ್ಲ. ಈಗ, ಕಡೆಯ ದಿನಾಂಕ ನಿಗದಿಪಡಿಸಲು ನಿರ್ಧರಿಸಿದ್ದೇವೆ. ಅದರಂತೆ, ಜು.27ರಂದು ಅರ್ಜಿ ಸಲ್ಲಿಕೆಗೆ ಕಡೆಯ ದಿನವಾಗಿರುತ್ತದೆ” ಎಂದು ಹೇಳಿದರು.

ಸರ್ಕಾರ ನೀಡಿದ ಗಡುವಿನೊಳಗೆ ಅರ್ಜಿ ಸಲ್ಲಿಕೆ ಮಾಡದಿದ್ದರೆ ಜನರು ಯಾವುದೇ ಆತಂಕ ಪಡಬೇಕಿಲ್ಲ. ಸಚಿವರು, “ಯೋಜನೆ ವ್ಯಾಪ್ತಿಯಿಂದ ಹೊರಗುಳಿದವರನ್ನು ಯೋಜನೆಯೊಳಕ್ಕೆ ತರಲು ಗೃಹಜ್ಯೋತಿ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕದ ನಂತರ ಎರಡು ತಿಂಗಳವರೆಗೆ ವಿದ್ಯುತ್ ಅದಾಲತ್ ನಡೆಸಲಾಗುವುದು” ತಿಳಿಸಿದ್ದಾರೆ.

ಯೋಜನೆ ಫಲಾನುಭವಿಯಾಗಲು ಜೂನ್ 18ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ.

ಜನರು ಯೋಜನೆಯ ಫಲಾನುಭವಿಯಾಗಲು ಆನ್‌ಲೈನ್‌ ಮೂಲಕ ಸೇವಾ ಸಿಂಧು ಪೋರ್ಟಲ್‌ಗೆ ಭೇಟಿ ನೀಡಿ (https://sevasindhugs.karnataka.gov.in/) ವಿವಿರಗಳನ್ನು ನೀಡಿ ಸುಲಭವಾಗಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಇಂಧನ ಇಲಾಖೆ ಹತ್ತಿರದ ನಿಮ್ಮ ಹತ್ತಿರದ ವಿದ್ಯುತ್ ಕಚೇರಿ, ಬೆಂಗಳೂರು ಒನ್, ಗ್ರಾಮ್ ಒನ್ ಮತ್ತು ಕರ್ನಾಟಕ ಒನ್ ಕೇಂದ್ರ ದಲ್ಲಿಯೂ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದೆ.

‘ಗೃಹಜ್ಯೋತಿ’ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ. ಗ್ರಾಮೀಣ ಪ್ರದೇಶದ ಜನರು ಯೋಜನೆ ಫಲಾನುಭವಿಗಳು ಗ್ರಾಮ ಪಂಚಾಯತಿಗಳಲ್ಲಿನ ಬಾಪೂಜಿ ಸೇವಾ ಕೇಂದ್ರದಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆದರೆ ಈ ಕೇಂದ್ರದಲ್ಲಿ ಅರ್ಜಿಗಳನ್ನು ಸಲ್ಲಿಸಲು ಪ್ರತಿ ಅರ್ಜಿಗೆ 20 ರೂ. ಗಳ ಶುಲ್ಕವನ್ನು ನಿಗದಿ ಮಾಡಲಾಗಿದೆ.