Friday, 22nd November 2024

ಗೃಹಜ್ಯೋತಿ ಯೋಜನೆ ನೋಂದಣಿ: ಇಂದು ಕೊನೆಯ ದಿನ

ಬೆಂಗಳೂರು: ರಾಜ್ಯ ಸರ್ಕಾರದ ( Karnataka Government ) ಮಹತ್ವಾಕಾಂಕ್ಷೆಯ ಯೋಜನೆಗಳ ಪೈಕಿ ಗೃಹಜ್ಯೋತಿ ಯೋಜನೆಯ ಅಡಿಯಲ್ಲಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ( Free Electricity ) ಪ್ರಯೋಜನ ಪಡೆಯಲು ನೋಂದಾಯಿಸಿ ಕೊಳ್ಳಲು ಮಂಗಳವಾರ ಕೊನೆಯ ದಿನವಾಗಿದೆ.

ನೋಂದಾಯಿಸಿಕೊಂಡವರಿಗೆ ಮಾತ್ರವೇ ಆಗಸ್ಟ್ ತಿಂಗಳ ಬಿಲ್ ಮೊತ್ತ 00 ಬರಲಿದೆ.

ಫಲಾನುಭವಿಗಳಲ್ಲಿ ಶೇ.60ರಷ್ಟು ಗ್ರಾಹಕರು ಮಾತ್ರವೇ ಯೋಜನೆಗೆ ನೋಂದಾಯಿಸಿ ಕೊಂಡಿದ್ದಾರೆ. ಇನ್ನೂ ಶೇ.40ರಷ್ಟು ವಿದ್ಯುತ್ ಗ್ರಾಹಕರು ನೋಂದಣಿ ಮಾಡುವುದು ಬಾಕಿ ಉಳಿದಿದೆ ಎನ್ನಲಾಗುತ್ತಿದೆ.

ವಿದ್ಯುತ್ ಸರಬರಾಜು ಕಂಪನಿ ನೀಡಿರುವ ಮಾಹಿತಿ ಪ್ರಕಾರ, 1.92 ಕೋಟಿ ಗೃಹ ಬಳಕೆ ದಾರರಿದ್ದು, ಇವರಲ್ಲಿ ಶೇ.90ಕ್ಕೂ ಅಧಿಕ ಜನರು ಮಾಸಿಕ 200 ಯೂನಿಟ್ ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುತ್ತಿದ್ದಾರಂತೆ.

ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ ಮೊದಲ ತಿಂಗಳಲ್ಲಿ 200 ಯೂನಿಟ್ ಉಚಿತ ವಿದ್ಯುತ್ ಪ್ರಯೋಜನ ಪಡೆಯಲು ಜು.25ರ ಇಂದೇ ನೋಂದಣಿಗೆ ಕೊನೆಯ ದಿನವಾಗಿದೆ.

ಇಂದು ಯಾರೆಲ್ಲಾ ಗೃಹ ಜ್ಯೋತಿಗೆ ನೋಂದಣಿ ಮಾಡಿಕೊಳ್ಳಲಿದ್ದಾರೋ ಅವರಿಗೆಲ್ಲ ಆಗಸ್ಟ್ ತಿಂಗಳಿನಲ್ಲಿ ಶೂನ್ಯ ವಿದ್ಯುತ್ ಬಿಲ್ ಬರಲಿದೆ. ಒಂದು ವೇಳೆ ನೋಂದಾಯಿಸಿಕೊಳ್ಳದಿದ್ದರೇ ಆಗಸ್ಟ್ ನಂತ್ರದ ತಿಂಗಳಿನ ಬಿಲ್ ಶೂನ್ಯ ಬರಲಿದೆ.