Wednesday, 11th December 2024

ಪಕ್ಕದ ರಾಜ್ಯದವರು ಕೂಡ ನಮ್ಮ ಸಮಸ್ಯೆಯನ್ನು ಅರ್ಥ ಮಾಡಿಕೊಳ್ಳಬೇಕು: HD ದೇವೇಗೌಡ

ಬೆಂಗಳೂರು : ಕಾವೇರಿ ನದಿ ವಿಚಾರವಾಗಿ ಬೆಂಗಳೂರು ಬಂದ್ ಮಾಡಿ ತೀವ್ರವಾದ ಪ್ರತಿಭಟನೆ ಮತ್ತು ಹೋರಾಟಗಳ ನಡೆಸುತ್ತಿದ್ದು. ]ಪಕ್ಕದ ರಾಜ್ಯದವರು ಕೂಡ ನಮ್ಮ ಸಮಸ್ಯೆಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಪ್ರಧಾನಿ HD ದೇವೇಗೌಡರು ತಿಳಿಸಿದರು.

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು, ನಮ್ಮ ನೋವು ನಮ್ಮ ಪಕ್ಕದ ರಾಜ್ಯದವರು ಅರ್ಥಮಾಡಿಕೊಳ್ಳಬೇಕು. ಸಮಸ್ಯೆ ಪರಿಹಾರಕ್ಕಾಗಿ ಸ್ವಲ್ಪ ಮುಂದಾಗಲಿ ಎಂದು ಬಂದ್ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಹೀಗಾಗಿ ಜೆಡಿಎಸ್ ಕೂಡ ಬೆಂಗಳೂರು ಬಂದ್ ಗೆ ಬೆಂಬಲಿಸಿದೆ. ಎಲ್ಲರೂ ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕು.ಆದ್ದರಿಂದ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ಕೂಡಲೇ ನಿಲ್ಲಿಸಬೇಕು ಎಂದು ದೇವೇಗೌಡ ಆಗ್ರಹಿಸಿದರು.