Thursday, 12th December 2024

ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಇನ್ನೂ ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳಿಂದ ಭಾರಿ ಮಳೆಯಾಗು ತ್ತಿದ್ದು, ಮುಂದಿನ 48 ಗಂಟೆಗಳಲ್ಲಿ ಮಳೆ ಆರ್ಭಟ ಇನ್ನಷ್ಟು ಹೆಚ್ಚಲಿದೆ.

ದಕ್ಷಿಣ ಕನ್ನಡ, ಮಂಗಳೂರಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಇಂದು ಕೂಡ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸ ಲಾಗಿದೆ. ಜು.2ರಿಂದ 4ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.