Wednesday, 17th July 2024

ಬೆಂಗಳೂರಿನಲ್ಲಿ ಕಂಬಳ: ಕನ್ನಡದಲ್ಲಿ ವೀಕ್ಷಕ ವಿವರಣೆ

ಬೆಂಗಳೂರು: ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಂಬಳ ನಡೆಸಲು ಸಕಲ ಸಿದ್ದತೆ ನಡೆಸಲಾಗಿದ್ದು, ಎರಡು ದಿನಗಳ ಕಾಲ ಅತ್ಯಂತ ಯಶಸ್ವಿಯಾಗಿ ಕೂಟ ನಡೆಯಲಿದೆ ಹಾಗೂ ಸ್ಥಳೀಯರಿಗೆ ಅರ್ಥವಾಗುವಂತೆ ಕನ್ನಡದಲ್ಲಿ ವೀಕ್ಷಕ ವಿವರಣೆ ಇರಲಿದೆ ಎಂದು ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಕಂಬಳ ಕೂಟಕ್ಕೆ ಏಳರಿಂದ ಎಂಟು ಲಕ್ಷ ಜನರು ಸೇರುವ ನಿರೀಕ್ಷೆಯಿದೆ. ವಿಶಾಲ ಪಾರ್ಕಿಂಗ್, ಸ್ವಯಂ ಸೇವಕರು ಸೇರಿ ಎಲ್ಲಾ ಸಿದ್ದತೆ ಮಾಡಲಾಗಿದೆ ಎಂದರು. ಕಂಬಳ ನಡೆಯುವ ಅರಮನೆ ಮೈದಾನಕ್ಕೆ ಜನರು ಬರಲು ಸುಲಭವಾಗುವಂತೆ 150 ಹೆಚ್ಚುವರಿ ಬಸ್ ಗಳನ್ನು ಈ ಮಾರ್ಗಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದರು.

ರಾಜ್ಯದ ಇತಿಹಾಸದಲ್ಲಿ ಮೈಲಿಗಲ್ಲಿನ ಕ್ಷಣಕ್ಕೆ ಬೆಂಗಳೂರು ಸಾಕ್ಷಿಯಾಗುತ್ತಿದೆ. ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಂಬಳ ನಡೆಯಲಿದ್ದು, ರಾಜ್ಯದ ಅತ್ಯಂತ ಯಶಸ್ವಿ ಕಾರ್ಯಕ್ರಮಗಳಲ್ಲಿ ಒಂದಾಗಲಿದೆ ಎಂದು ಸಂಗೀತ ನಿರ್ದೇಶಕ ಗುರುಕಿರಣ್ ಹೇಳಿದರು.

27 ಏಕರೆ ಜಾಗದಲ್ಲಿ ಬೃಹತ್ ಕೂಟ ಆಯೋಜನೆಗೆ ಸಿದ್ದತೆ ನಡೆಸಲಾಗಿದೆ. ಕಂಬಳದ ಜೊತೆಗೆ ನಿರಂತರವಾಗಿ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆಯಲಿದೆ. ಕರಾವಳಿಯ ಯಕ್ಷಗಾನ, ಹುಲಿ ಕುಣಿತ ಮುಂತಾದ ಕಲೆಗಳ ಪ್ರದರ್ಶನ ನಡೆಯಲಿದೆ. ಅಲ್ಲದೆ ಖ್ಯಾತ ಕಲಾವಿದರ ಸಂಗೀತ ಸಂಜೆ ನಡೆಯಲಿದೆ ಎಂದರು.

Leave a Reply

Your email address will not be published. Required fields are marked *

error: Content is protected !!