Saturday, 2nd December 2023

ನವೆಂಬರ್‌ 21ರಂದು ಕನ್ನಡ ಸಾಹಿತ್ಯ ಪರಿಷತ್ತು ಚುನಾವಣೆ

ಬೆಂಗಳೂರು: ಕರೋನಾ ಕಾರಣದಿಂದಾಗಿ ರಾಜ್ಯ ಸರ್ಕಾರ 2021ನೇ ಸಾಲಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಜಿಲ್ಲಾಧ್ಯಕ್ಷರು, ಗಡಿನಾಡು ಘಟಕದ ಅಧ್ಯಕ್ಷರ ಚುನಾವಣೆಯನ್ನು ಮುಂದೂಡಿಕೆ ಮಾಡಿತ್ತು.

ಇದೀಗ ಚುನಾವಣೆ ನಡೆಸಲು ಗ್ರೀನ್ ಸಿಗ್ನಲ್ ನೀಡಿದೆ. ಅಲ್ಲದೇ ಚುನಾವಣಾ ಪರಿಷ್ಕೃತ ವೇಳಾಪಟ್ಟಿಯನ್ನು ಕೂಡ ಪ್ರಕಟಿಸಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಚುನಾವಣಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಮಾಹಿತಿ ನೀಡಿದ್ದು,  ಅ.10ರಂದು 2020ರ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ನಡೆಸಲು ಅನುಮತಿ ನೀಡಿದೆ. ಈ ಹಿನ್ನಲೆಯಲ್ಲಿ ನವೆಂಬರ್‌  21ರಂದು ಚುನಾವಣೆ ನಿಗದಿಗೊಳಿಸಲಾಗಿದೆ. ಸರ್ಕಾರದ ಆದೇಶ ದಂತೆ ಈ ಕೆಳಕಂಡಂತೆ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಗಳನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

  • ನವೆಂಬರ್‌ 6ರಂದು ಗಡಿನಾಡು, ಹೊರನಾಡ ಮತದಾರರಿಗೆ ಕೇಂದ್ರ ಚುನಾವಣಾಧಿಕಾರಿಗಳ ಕಚೇರಿಯಿಂದ ರಿಜಿಸ್ಟರ್ಡ್ ಅಂಚೆಯ ಮೂಲಕ ಮತಪತ್ರಗಳ ರವಾನೆಗೆ ಕೊನೆಯ ದಿನ
  • ನವೆಂಬರ್‌ 21ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ
  • ಮತ ಎಣಿಕೆ ಮತ್ತು ಜಿಲ್ಲಾ ಘಟಕಗಳ ಅಧ್ಯಕ್ಷರ ಫಲಿತಾಂಶ ಘೋಷಣೆ

Leave a Reply

Your email address will not be published. Required fields are marked *

error: Content is protected !!