Sunday, 12th May 2024

ಡಿಸೆಂಬರ್ 5 ರಂದು ಕರ್ನಾಟಕ ಬಂದ್ 

ಬೆಂಗಳೂರು : ರಾಜ್ಯ ಸರ್ಕಾರವು ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಡಿಸೆಂಬರ್ 5 ರಂದು ಕನ್ನಡ ಪರ  ಸಂಘಟನೆಗಳಿಂದ ಕರ್ನಾಟಕ ಬಂದ್ ಗೆ ಕರೆ ನೀಡಿವೆ.

ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ನಡೆಸಿದ ಪೂರ್ವಭಾವಿ ಸಭೆಯಲ್ಲಿ ಕರ್ನಾಟಕ ಬಂದ್ ಗೆ ಬೆಂಬಲ ನೀಡಿದ್ದು , ಡಿಸೆಂಬರ್ 5 ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ತೀರ್ಮಾನಿಸಿವೆ.

ಮುಖ್ಯಮಂತ್ರಿ ಬಿ . ಎಸ್ . ಯಡಿಯೂರಪ್ಪ ಇತ್ತೀಚೆಗಷ್ಟೇ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಮರಾಠ ಪ್ರಾಧಿಕಾರ ರಚನೆಗೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಮಾಡಲು ನಿರ್ಧರಿಸಿವೆ.

Leave a Reply

Your email address will not be published. Required fields are marked *

error: Content is protected !!