Thursday, 12th December 2024

ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ನೇಮಕ

ಬೆಂಗಳೂರು: ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಅವರು ಜುಲೈ 2 ರಂದು ನಿವೃತ್ತರಾಗು ತ್ತಿರುವ ಹಿನ್ನೆಲೆಯಲ್ಲಿ ನ್ಯಾ.ಅಲೋಕ್ ಆರಾಧೆ ಅವರನ್ನು ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಗುರುವಾರ ನೇಮಕ ಮಾಡಲಾಗಿದೆ.

ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಆರಾಧೆ ಅವರನ್ನು ನೇಮಿಸಿರುವ ಕುರಿತು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿದ್ದಾರೆ. ನ್ಯಾ.ಆರಾಧೆ ಅವರು ಕರ್ನಾಟಕ ಹೈಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿದ್ದು, ಜುಲೈ 3ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಸುಪ್ರೀಂ ಕೋರ್ಟ್ ನ್ಯಾಯಮರ್ತಿಗಳು 65ನೇ ವರ್ಷ ವಯಸ್ಸಿಗೆ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳು 62ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ.