Wednesday, 9th October 2024

ಜುಲೈ 7 ರಂದು ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ 

ಬೆಂಗಳೂರು: ಜು.7 ರಂದು 3.35 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ  ಹೇಳಿ ದ್ದಾರೆ.

ಇದೇ ವೇಳೆ, ಈ ಬಾರಿ ಬಜೆಟ್ ಗಾತ್ರ 335 ಲಕ್ಷ ಕೋಟಿಗೆ ಏರಿಕೆಯಾಗುವ ಸಾಧ್ಯತೆ ಇದೆ. 5 ಗ್ಯಾರಂಟಿ ಜಾರಿಗೆ ಸುಮಾರು 59-60 ಸಾವಿರ ಕೋಟಿ ರೂಪಾಯಿ ಹಣ ಬೇಕಾಗುತ್ತದೆ ಎಂದರು.

ನಾವು 5 ಗ್ಯಾರೆಂಟಿ ಘೋಷಣೆ ಮಾಡಿದ್ದೇವೆ. ಇದಕ್ಕಾಗಿ ಹಣ ಹೊಂದಿಸಬೇಕಿದೆ. ಹೀಗಾಗಿ ಬಜೆಟ್ ಗಾತ್ರ ಹೆಚ್ಚಾಗಲಿದೆ ಎಂದು ತಿಳಿಸಿದರು. ಕೇಂದ್ರದಿಂದ ಅಕ್ಕಿ ಪಡೆಯುವ ಪ್ರಯತ್ನಕ್ಕೆ ಹಿನ್ನಡೆಯಾಗಿರುವ ಕಾರಣ ಯೋಜನೆ ಕೊಂಚ ವಿಳಂಬವಾಗುವ ಸಾಧ್ಯತೆ ಇದೆ ಎಂದು ಇದೇ ವೇಳೆ ಉಲ್ಲೇಖ ಮಾಡಿದರು.