Sunday, 15th December 2024

ಸಿಇಟಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟ

ಬೆಂಗಳೂರು : ಸಿಇಟಿ ಪರೀಕ್ಷಾ ಫಲಿತಾಂಶ ಶನಿವಾರ ಪ್ರಕಟವಾಗಲಿದೆ. ಮಲ್ಲೇಶ್ವರಂ ಕೆಇಎ ಬೋರ್ಡ್‌ಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ಅವರು ಫಲಿತಾಂಶ ಪ್ರಕಟಿಸಲಿದ್ದಾರೆ.

ಜೂನ್ 16 ರಿಂದ 18 ವರೆಗೆ CET ಪರೀಕ್ಷೆ ನಡೆದಿತ್ತು. ರಾಜ್ಯದ ಒಟ್ಟು 486 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಒಟ್ಟು 2,16,559 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಣಿ ಮಾಡಿಸಿಕೊಂಡಿದ್ದರು. ಜೂನ್ 16 ರಂದು ಜೀವಶಾಸ್ತ್ರ ಹಾಗೂ ಗಣಿತ ಜೂನ್ 17 ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಜೂನ್ 18 ರಂದು ಹೊರನಾಡ ಕನ್ನಡಿಗರಿಗೆ, ಕನ್ನಡ ಪರೀಕ್ಷೆ ನಡೆದಿತ್ತು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ kea.kar.nic.in ಫಲಿತಾಂಶ ಪ್ರಕಟವಾಗಲಿದೆ. ವೆಬ್‌ಸೈಟ್‌ನ ಮುಖಪುಟದಲ್ಲಿ ‘KCET ಫಲಿತಾಂಶ 2022’ ಮೇಲೆ ಲಾಗ್ ಇನ್ ಮಾಡಲು ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ನಮೂದಿಸಿ. ಆಗ ನಿಮ್ಮ KCET ಫಲಿತಾಂಶಗಳು ಸ್ಕ್ರೀನ್ ಮೇಲೆ ಕಾಣಿಸಿಕೊಳ್ಳುತ್ತವೆ.