Friday, 13th December 2024

ಸುಪ್ರೀಂ ಆದೇಶ: ಕೆಆರ್’ಎಸ್, ಕಬಿನಿ ಜಲಾಯಶದಿಂದ ತಮಿಳುನಾಡಿಗೆ ನೀರು ಬಿಡುಗಡೆ

ಬೆಂಗಳೂರು: ಕಾವೇರಿ ನದಿ ನೀರಿಗಾಗಿ ರೈತರ ಪ್ರತಿಭಟನೆ ನಡುವೆಯೂ ಸುಪ್ರೀಂ ಕೋರ್ಟ್ ಆದೇಶದಂತೆ ಕೆ ಆರ್ ಎಸ್ ಹಾಗೂ ಕಬಿನಿ ಜಲಾಯಶದಿಂದ ತಮಿಳುನಾಡಿಗೆ 5,000 ಕ್ಯೂಸೆಕ್ ನೀರನ್ನು ಹರಿಸಲಾಗಿದೆ.

ಸುಪ್ರೀಂ ಕೋರ್ಟ್ ಕಾವೇರಿ ನದಿ ನೀರು ಬಿಡುಗಡೆಗಾಗಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ, ಪ್ರತಿ ದಿನ 5,000 ಕ್ಯೂಸೆಕ್ ನೀರು ಹರಿಸುವಂತೆ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ತಮಿಳು ನಾಡಿಗೆ ಕೆ ಆರ್ ಎಸ್ ಜಲಾಶಯದಿಂದ 3,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.

ಕೆ ಆರ್ ಎಸ್ ಜಲಾಶಯದಿಂದ ಸೀಪೇಸ್ ಹಾಗೂ ನಾಲೆಗೆ ಹರಿಸಿರುವ ನೀರಿನಲ್ಲೇ 3 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲಾಗಿದ್ದು, ಉಳಿದ 2,000 ಕ್ಯೂಸೆಕ್ ನೀರನ್ನು ಕಬಿನಿಯಿಂದ ತಮಿಳುನಾಡಿಗೆ ಹರಿಸಲಾಗಿದೆ.

ಒಟ್ಟಾರೆಯಾಗಿ  ತಮಿಳುನಾಡಿಗೆ ಕೆ ಆರ್ ಎಸ್ ಹಾಗೂ ಕಬಿನಿ ಜಲಾಶಯದಿಂದ ತಮಿಳುನಾಟಿಗೆ 5,734 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ.

ಮತ್ತೊಂದೆಡೆ ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ಹಿನ್ನಲೆ ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ನೀರಿಗಾಗಿ ಹೋರಾಟ ತೀವ್ರಗೊಂಡಿದೆ. ಇಡೀ ಬೆಂಗಳೂರಿಗೆ ನೀರು ಸರಬರಾಜು ಮಾಡುವ ಟಿ.ಕೆ.ಹಳ್ಳಿ ಪಂಪ್​​ಹೌಸ್​ಗೆ ಕನ್ನಡಪರ ಸಂಘಟನೆಗಳ ಮುತ್ತಿಗೆ ಹಾಕಲಿದ್ದು, ಬೆಂಗಳೂರಿಗೆ ನೀರು ನಿಲ್ಲಿಸಿ ರೈತರ ಬೆಳೆಗೆ ನೀರು ಹರಿಸುವಂತೆ ಆಗ್ರಹಿಸಿದ್ದಾರೆ.