Tuesday, 10th September 2024

ಸರ್ಕಾರದ ಬೊಕ್ಕಸಕ್ಕೆ ಎಣ್ಣೆ ಕಿಕ್​

ಬೆಂಗಳೂರು: ಹೊಸ ವರ್ಷದ ಆಗಮನದ ಜೊತೆ ಮದ್ಯಯ ಕಿಕ್​ ಕೂಡ ಜೋರಾಗಿಯೇ ಇದೆ.

2023ರ ಕೊನೆಯ ದಿನವಾದ ಭಾನುವಾರ 193 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದೆ. ಈ ಮೂಲಕ ಒಂದೇ ದಿನ ಭರ್ಜರಿ ಲಿಕ್ಕರ್ ಸೇಲ್ ಆಗಿದೆ.

ಡಿಸೆಂಬರ್ ತಿಂಗಳಲ್ಲಿ ಇಂಡಿಯನ್ ಮೇಡ್ ಲಿಕ್ಕರ್ 3,07,953 ಬಾಕ್ಸ್‌, ಬಿಯರ್ 1,95,005 ಬಾಕ್ಸ್ ಮಾರಾಟವಾಗಿದೆ. ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ 2,611 ಕೋಟಿ ಆದಾಯ ಬಂದಿತ್ತು. ಈ ವರ್ಷ ಡಿಸೆಂಬರ್ ತಿಂಗಳಲ್ಲಿ 3 ಸಾವಿರ ಕೋಟಿ ಆದಾಯ ಸಂಗ್ರಹವಾಗಿದೆ.

ಒಟ್ಟಿನಲ್ಲಿ ಎರಡು ವರ್ಷಕ್ಕೆ ಹೋಲಿಸಿದರೆ ಈ ವರ್ಷದಲ್ಲಿ ಮದ್ಯ ಮಾರಾಟದಿಂದ ಸರ್ಕಾರದ ಬೊಕ್ಕಸಕ್ಕೆ ಹೆಚ್ಚು ಆದಾಯ ಹರಿದುಬಂದಿದೆ. ನಗರ ಹಾಗೂ ಗ್ರಾಮೀಣ ಭಾಗದ ಮೂಲೆ ಮೂಲೆಯಲ್ಲಿಯೂ ಜನರು ಮದ್ಯದ ನಶೆಯ ಮೂಲಕ ಹೊಸ ವರ್ಷವನ್ನು ಅದ್ಧೂರಿಯಾಗಿ ಬರಮಾಡಿ ಕೊಂಡಿದ್ದಾರೆ.

Leave a Reply

Your email address will not be published. Required fields are marked *