Wednesday, 11th December 2024

ಕಾಂಗ್ರೆಸ್ ಒಬಿಸಿ ಘಟಕದ ಅಧ್ಯಕ್ಷರನ್ನಾಗಿ ಮಧು ಬಂಗಾರಪ್ಪ ನೇಮಕ

ಬೆಂಗಳೂರು: ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರನ್ನಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ನೇಮಕ ಮಾಡಲಾಗಿದೆ.

ಬುಧವಾರ ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಹಿಂದುಳಿದ ವರ್ಗಗಳ ಸಂಘಟನೆ ಬಲಪಡಿಸಲು ಮುಂದಾ ಗುವಂತೆ ಎಐಸಿಸಿ ಆದೇಶದಲ್ಲಿ ಸೂಚಿಸಲಾಗಿದೆ.

ಜೆಡಿಎಸ್ ನಲ್ಲಿ ಇದ್ದ ಮಧು ಬಂಗಾರಪ್ಪ ಕಳೆದ ಲೋಕಸಭಾ ಚುನಾವಣೆ ಬಳಿಕ ಕುಮಾರಸ್ವಾಮಿಯವರಿಂದ‌ ಅಂತರ ಕಾಯ್ದು ಕೊಂಡಿದ್ದರು‌. ಬಳಿಕ ಅವರನ್ನು ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಗೆ ಕರೆ ತಂದಿದ್ದರು.

ಈ ಹಿನ್ನೆಲೆಯಲ್ಲಿ ವರಿಷ್ಢರ ಜತೆಗೆ ಖುದ್ದು ಮಾತನಾಡಿದ ಡಿ.ಕೆ.ಶಿವಕುಮಾರ್ ಓಬಿಸಿ ಅಧ್ಯಕ್ಷ ಸ್ಥಾನ ಲಭಿಸುವಂತೆ ನೋಡಿ ಕೊಂಡಿದ್ದಾರೆ. ಈಡಿಗ ಸಮುದಾಯಕ್ಕೆ ಸೇರಿರುವ ಮಧು ಬಂಗಾಪ್ಪ ಹಿಂದುಳಿದ ವರ್ಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ.