Wednesday, 11th December 2024

ನಗರದಲ್ಲಿನ್ನು ಮಾಸ್ಕ್ ಕಡ್ಡಾಯ; ತಪ್ಪಿದಲ್ಲಿ ದಂಡ ವಿಧಿಸಲು ಚಿಂತನೆ

ಬೆಂಗಳೂರು: ನಗರದಲ್ಲಿ ಕರೋನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರಿಕೆಯಾಗು ತ್ತಿವೆ. ಕೋವಿಡ್ ನಿಯಂತ್ರಣ ಸಂಬಂಧ ಈಗಾಗಲೇ ಮಾಸ್ಕ್ ಅನ್ನು ಕಡ್ಡಾಯ ಹಾಗೂ ಮಾಸ್ಕ್ ಧರಿಸದೇ ಇದ್ದರೇ ದಂಡ ಹಾಕಲು ಬಿಬಿಎಂಪಿ ಚಿಂತನೆ ನಡೆಸಿದೆ ಎನ್ನಲಾಗಿದೆ.

ರಾಜ್ಯ ಆರೋಗ್ಯ ಆಯುಕ್ತ ಡಿ ರಂದೀಪ್ ಅವರು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರಿಗೆ ಪ್ರಸ್ತಾವನೆ ಕಳುಹಿಸಿದ್ದು, ಬಿಬಿಎಂಪಿ ಮತ್ತು ಬೆಂಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ನಿಯಮ ಜಾರಿಗೆ ತರುವಂತೆ ಮನವಿ ಮಾಡಿಕೊಂಡಿದ್ದಾರೆ.

ಕರ್ನಾಟಕದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಸಭೆ ನಡೆಸಿದ್ದು, ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಬಗ್ಗೆ ವಿವರವಾದ ಚರ್ಚೆ ನಡೆಸಿದರು. ಮಾಸ್ಕ್ ಧರಿಸದವರಿಗೆ ಸರ್ಕಾರಿ ಸಂಸ್ಥೆಗಳನ್ನು ಪ್ರವೇಶಿಸಲು ಅವಕಾಶ ನೀಡಬಾರದು ಎಂದು ಶಿಫಾರಸು ಮಾಡಿದರು.

ಶಿಫಾರಸುಗಳನ್ನು ಸರ್ಕಾರಕ್ಕೆ ರವಾನಿಸಲಾಗಿದ್ದು, ವಾರದೊಳಗೆ ಅಂತಿಮ ನಿರ್ಧಾರ ಕೈಗೊಳ್ಳ ಲಾಗುತ್ತದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.