Sunday, 15th December 2024

ಮಂತ್ರಿ ಡೆವಲಪರ್ಸ್ ವ್ಯವಸ್ಥಾಪಕ ನಿರ್ದೇಶಕನ ಬಂಧನ

ಬೆಂಗಳೂರು: ಫ್ಲ್ಯಾಟ್ ನಿರ್ಮಿಸಿ ಕೊಡುವುದಾಗಿ ಹೇಳಿ ಹಣ ಹೂಡಿಕೆ ಮಾಡಿಸಿಕೊಂಡ ಬಳಿಕ ವಂಚನೆ ಮಾಡಿದ ಪ್ರಕರಣದಲ್ಲಿ ಮಂತ್ರಿ ಡೆವಲಪರ್ಸ್ ವ್ಯವಸ್ಥಾಪಕ ನಿರ್ದೇಶಕ ಸುಶೀಲ್ ಮಂತ್ರಿ, ಅವರ ಪುತ್ರ ಪ್ರತೀಕ್ ಮಂತ್ರಿಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿ ದ್ದಾರೆ.

2019ರಲ್ಲಿ ಈ ಕುರಿತಂತೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದನ್ನು ತನಿಖೆಗಾಗಿ ಸಿಐಡಿ ಗೆ ವರ್ಗಾ ಯಿಸಲಾಗಿತ್ತು. ಇದೀಗ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಸೆ.12ರ ವರೆಗೆ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.

ಮಂತ್ರಿ ಡೆವಲಪರ್ಸ್ ವ್ಯವಸ್ಥಾಪಕ ನಿರ್ದೇಶಕ ಸುಶೀಲ್ ಮಂತ್ರಿ ಅಕ್ರಮ ಹಣ ವರ್ಗಾ ವಣೆ ಕಾಯಿದೆ ಅನ್ವಯ ಜಾರಿ ನಿರ್ದೇಶನಾಲಯದಿಂದ ಕೂಡ ಈ ಹಿಂದೆ ಬಂಧನಕ್ಕೊಳಗಾಗಿದ್ದು, ಕೆಲ ದಿನಗಳ ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು ಎಂದು ಹೇಳಲಾಗಿದೆ.