Sunday, 19th May 2024

ಕರ್ನಾಟಕ ಬಂದ್ ಎಫೆಕ್ಟ್: ಮೆಜೆಸ್ಟಿಕ್, ಟೌನ್ ಹಾಲ್ ಮೆಟ್ರೋ ನಿಲ್ದಾಣ ಮುಚ್ಚುಗಡೆ

ಬೆಂಗಳೂರು: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌ನಲ್ಲಿ ಹೆಚ್ಚು ಜನಸಂದಣಿ ಇರುತ್ತದೆ. ಹಾಗೆಯೇ ಟೌನ್‌ಹಾಲ್‌ಗೆ ಹತ್ತಿರವಿರುವ ಕಾರಣ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸಲು ಮೆಟ್ರೋ ನಿಲ್ದಾಣವನ್ನು ಮುಚ್ಚಲಾಗಿದೆ.

ಬೆಳಗ್ಗೆ ಎಂದಿನಂತೆ ಮೆಟ್ರೋ ಸಂಚರಿಸಿತ್ತು, ಬಳಿಕ ಕೆಂಪೇಗೌಡ ಬಸ್‌ ನಿಲ್ದಾಣಕ್ಕೆ ತೆರಳುವ ಮೆಟ್ರೋ ದ್ವಾರವನ್ನು ಬಂದ್ ಮಾಡಲಾಗಿತ್ತು. ಇದೀಗ ಮೆಟ್ರೋ ಮಾರ್ಗವನ್ನೇ ಸ್ಥಗಿತಗೊಳಿಸಿರುವ ಮಾಹಿತಿ ಲಭ್ಯವಾಗಿದೆ.

ಬಂದ್‌ ಆದ ಹಿನ್ನೆಲೆಯಲ್ಲಿ ಪ್ರಯಾಣಕ್ಕೆ ಬಂದ ಪ್ರಯಾಣಿಕರು ವಾಪಸ್‌ ತೆರಳುತ್ತಿದ್ದಾರೆ. ನೇರಳೆ ಮತ್ತು ಹಸಿರು ಮಾರ್ಗಗಳನ್ನು ಜೋಡಿಸುವ ಕಂಪೇಗೌಡ ನಿಲ್ದಾಣದಿಂದ ಪ್ರತಿದಿನ ಸಾವಿರಾರು ಮಂದಿ ಪ್ರಯಾಣಿಸುತ್ತಾರೆ. ಆದರೆ ಕರ್ನಾಟಕ ಬಂದ್‌ ಹಿನ್ನೆಲೆ ಯಲ್ಲಿ ಈ ನಿಲ್ದಾಣವನ್ನು ಬಂದ್‌ ಮಾಡಲಾಗಿದೆ.

ಪ್ರತಿಭಟನಾ ನಿರತ ಮೂರನೇ ತಂಡವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಾಕಷ್ಟು ಕಾರ್ಯಕರ್ತರು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದ ಕಾರಣ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಲಿದೆ ಎನ್ನುವ ಆತಂಕವೂ ಕಾಡಿದೆ.

Leave a Reply

Your email address will not be published. Required fields are marked *

error: Content is protected !!