ಬೆಂಗಳೂರು : ಹಾಲು ಉತ್ಪಾದಕರಿಗೆ ಕೆಎಂಎಫ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಲೀಟರ್ ಎಮ್ಮೆ ಹಾಲಿಗೆ ಹೆಚ್ಚುವರಿಯಾಗಿ 9.25 ರೂ. ನೀಡಲು ನಿರ್ಧರಿಸಲಾಗಿದೆ ಎಂದು ಹಾಲು ಒಕ್ಕೂಟದ ಅಧ್ಯಕ್ಷ ಆರ್.ಕೆ.ಪಾಟೀಲ್ ತಿಳಿಸಿದ್ದಾರೆ.
ಹಾಲು ಒಕ್ಕೂಟದ ಅಧ್ಯಕ್ಷ ಆರ್.ಕೆ. ಪಾಟೀಲ್, ಪ್ರತಿ ಲೀಟರ್ ಎಮ್ಮೆ ಹಾಲಿಗೆ 9.25 ರೂ.ಗಳನ್ನು ಹೆಚ್ಚುವರಿಯಾಗಿ ನೀಡಲಾಗುವುದು. ಈ ಹಿಂದೆ ಲೀಟರ್ ಹಾಲಿಗೆ 36.80 ರೂ. ನೀಡಲಾಗುತ್ತಿತ್ತು. ಇದೀಗ 9.25 ರೂ. ಹೆಚ್ಚಳ ಮಾಡಿದ್ದು, ನಾಳೆಯಿಂದ ರೈತರಿಗೆ ಪ್ರತಿ ಲೀಟರ್ ಎಮ್ಮೆ ಹಾಲಿಗೆ 46 ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ.
ಹೆಚ್ಚುವರಿ ಹಣವನ್ನು ಕಲಬುರಗಿ, ಬೀದರ್, ಯಾದಗಿರಿ ರೈತರಿಗೆ ಮಾತ್ರ ಅನ್ವಯವಾಗಲಿದ್ದು, ನಾಳೆಯಿಂದಲೇ ರೈತರಿಗೆ ಹೆಚ್ಚಿನ ಹಣ ನೀಡಲಾಗುವುದು ಎಂದು ತಿಳಿಸಿದ್ದಾರೆ.