ಬೆಂಗಳೂರು : ಯಲಹಂಕ ವಾಯುನೆಲೆಗೆ ಐಎಎಫ್ ವಿಶೇಷ ವಿಮಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದರು.
ಸುಮಾರು ಒಂದುವರೆ ವರ್ಷದ ಬಳಿಕ ರಾಜ್ಯಕ್ಕೆ ಮೋದಿ ಆಗಮಿಸಿದ್ದಾರೆ. ಸಿಎಂ ಬಸವ ರಾಜ ಬೊಮ್ಮಯಿ ಅವರಿಂದ ಪ್ರಧಾನಿ ಮೋದಿ ಸ್ವಾಗತಿಸಲಾಯಿತು. ಕೆಂಗೇರಿ ಬಳಿಯ ಕೊಮ್ಮಘಟ್ಟ ಮೈದಾನದಲ್ಲಿ ಬಹಿರಂಗ ಸಭೆಯಲ್ಲಿ ಪ್ರಧಾನಿ ಭಾಗವಹಿಸಲಿದ್ದು, ಭದ್ರತೆಗಾಗಿ 2000 ಪೊಲೀಸರನ್ನು ನಿಯೋಜಿಸಲಾಗಿದೆ.
ಭದ್ರತೆ ಜವಾಬ್ದಾರಿಯನ್ನು ಕಮಿಷನರ್ ಪ್ರತಾಪ್ ರೆಡ್ಡಿಗೆ ವಹಿಸ ಲಾಗಿದ್ದು, ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, 8 ಡಿಸಿಪಿಗಳು, 25 ಎಸಿಪಿಗಳು, 123 ಇನ್ಸ್ ಪೆಕ್ಟರ್ ಗಳು, 125 ಸಬ್ ಇನ್ಸ್ ಪೆಕ್ಟರ್ ಗಳು, ಗರುಡ ಪಡೆ, ಕ್ಷಿಪ್ರ ಕಾರ್ಯಪಡೆಯನ್ನು ನಿಯೋಜಿಸ ಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಾಹ್ನ ಭಾರತೀಯ ವಿಜ್ಞಾನ ಸಂಸ್ಥೆ (IISc) ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು ಸೆಂಟರ್ ಫಾರ್ ಬ್ರೈನ್ ರಿಸರ್ಚ್ (CBR) ಅನ್ನು ಉದ್ಘಾಟಿಸಲಿದ್ದಾರೆ ಮತ್ತು ಬಾಗ್ಚಿ-ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಅಡಿಪಾಯ ಹಾಕಲಿದ್ದಾರೆ.