Saturday, 14th December 2024

ನಾನು ಧರಿಸಿದ್ದ ಪೆಂಡೆಂಟ್‌ ನಿಜವಾಗ ಹುಲಿ ಉಗುರಿನದ್ದಲ್ಲ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ನಾನು ಧರಿಸಿದ್ದ ಪೆಂಡೆಂಟ್‌ ನಿಜವಾಗ ಹುಲಿ ಉಗುರಿನದ್ದಲ್ಲ ಎಂದು ನಟ ಹಾಗೂ ರಾಜಕಾರಣಿ ನಿಖಿಲ್‌ ಕುಮಾರಸ್ವಾಮಿ ಸ್ಪಷ್ಟನೆ ಕೊಟ್ಟಿದ್ದಾರೆ.

‘ಇದು ಸತ್ಯಕ್ಕೆ ದೂರವಾದುದ್ದು’. ನಾನು ಧರಿಸಿದ್ದ ಲಾಕೆಟ್‌ನಲ್ಲಿರುವ ಉಗುರು ನೈಜ ಉಗುರಲ್ಲ. ಬೇಕಿದ್ದರೆ ಸಂಬಂಧ ಪಟ್ಟ ಅಧಿಕಾರಿಗಳು ಇದನ್ನು ಪರಿಶೀಲಿಸಬಹುದು ಎಂದಿದ್ದಾರೆ.

‘ತಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ’ ಎಂದೂ ನಿಖಿಲ್‌ ಅವರ ಟ್ವಿಟರ್‌ ಖಾತೆಯಲ್ಲಿ ಬರೆಯಲಾಗಿದೆ.

‘ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೊರೆ ನೀಡಿದ್ದು ಎಂದು ಹೇಳಿದ್ದಾರೆ.