Saturday, 7th September 2024

ಜೂ.27 ರಂದು ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತ್ಯೋತ್ಸವ

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತ್ಯೋತ್ಸವ’ ಕಾರ್ಯಕ್ರಮವನ್ನು ಜೂ.27 ರಂದು ದೇವನಹಳ್ಳಿ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಏರ್ಪಡಿಸಲಾಗಿದೆ.

ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ 9 ಗಂಟೆಗೆ ದೇವನಹಳ್ಳಿ ಪಟ್ಟಣದ ವೇಣುಗೋಪಾಲ ಸ್ವಾಮಿ ದೇವಾಲಯದಿಂದ ದೇವನಹಳ್ಳಿ ತಾಲ್ಲೂಕು ಕಚೇರಿ ಮುಂಭಾಗದವರೆಗೆ ಮೆರವಣಿಗೆ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಕೆ.ಸುಧಾಕರ್ ಉದ್ಘಾಟಿಸಲಿದ್ದಾರೆ. ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಎನ್.ನಾಗ ರಾಜು(ಎಂ.ಟಿ.ಬಿ) ಹಾಗೂ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ.ಸುನೀಲ್‌ಕುಮಾರ್ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದು, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ ಎಲ್.ಎನ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಬಿ.ಎನ್.ಬಚ್ಚೇಗೌಡ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಎ.ರವಿ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ. ವೆಂಕಟರಮಣಯ್ಯ, ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಡಾ|| ಕೆ.ಶ್ರೀನಿವಾಸಮೂರ್ತಿ, ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಕುಮಾರ್ ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯರುಗಳಾದ ಪುಟ್ಟಣ್ಣ, ಅ.ದೇವೇಗೌಡ, ಎಸ್.ರವಿ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಕೆ.ಪಿ. ಮೋಹನ್‌ ರಾಜ್, ದೇವನಹಳ್ಳಿ ಪುರಸಭೆ ಅಧ್ಯಕ್ಷರಾದ ಡಿ.ಗೋಪಮ್ಮ, ಉಪಾಧ್ಯಕ್ಷರಾದ ಕೆ. ಗೀತಾ ಶ್ರೀಧರ್‌ ಅವರು ಭಾಗವಹಿಸಲಿದ್ದಾರೆ.

ಮುಖ್ಯ ಭಾಷಣಕಾರರಾಗಿ ಕನ್ನಡ ಸಾಹಿತ್ಯ ಪರಿಷತ್‌ನ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಕೃಷ್ಣಪ್ಪ ಅವರು ಭಾಗವಹಿಸಲಿದ್ದು, ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲಾ ನಾಮ ನಿರ್ದೇಶಿತ ಸದಸ್ಯರು, ಸಮುದಾಯದ ಮುಖಂಡರು ಭಾಗವಹಿಸಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೇವಣಪ್ಪ.ಕೆ., ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ|| ಕೋನ ವಂಶಿಕೃಷ್ಣ ಅವರು ಭಾಗವಹಿಸಲಿದ್ದಾರೆ.

error: Content is protected !!