Sunday, 23rd June 2024

ವೀಕೆಂಡ್​ ಕರ್ಫ್ಯೂ ರದ್ದು: ನಮ್ಮ ಮೆಟ್ರೋ ಸಂಚಾರ ಯಥಾಸ್ಥಿತಿ ನಾಳೆಯಿಂದ

ಬೆಂಗಳೂರು: ರಾಜ್ಯದಲ್ಲಿ ವೀಕೆಂಡ್​ ಕರ್ಫ್ಯೂ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ನಮ್ಮ ಮೆಟ್ರೋ ರೈಲು ಸಂಚಾರ ಜ.22ರಿಂದ ಯಥಾಸ್ಥಿತಿಯಲ್ಲಿರ ಲಿದೆ.

ವಾರಾಂತ್ಯದ ಕರ್ಫ್ಯೂ ವಿಧಿಸಿದ್ದ ಹಿನ್ನೆಲೆಯಲ್ಲಿ ಹಾಗೂ ಸಂಚಾರ ನಿರ್ಬಂಧಗಳ ಪರಿಣಾಮ ನಮ್ಮ ಮೆಟ್ರೋ ರೈಲುಗಳ ಕಾರ್ಯಾಚರಣೆಯನ್ನು ಕಡಿಮೆ ಆವರ್ತನದೊಂದಿಗೆ ಕಾರ್ಯನಿರ್ವಹಿಸಲಾಗಿತ್ತು.

ರಾಜ್ಯ ಸರ್ಕಾರವು ವಾರಾಂತ್ಯದ ಕರ್ಫ್ಯೂ ವಾಪಸ್ ಪಡೆದಿರುವದರಿಂದ ಜ.22ರಿಂದ ವಾರದ ಎಲ್ಲಾ ದಿನಗಳಲ್ಲಿ ಭಾನುವಾರ ಹೊರತುಪಡಿಸಿ ಮೆಟ್ರೋ ರೈಲು ಗಳ ಸೇವೆಯು ಬೆಳಗ್ಗೆ 5 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಹಾಗೂ ಭಾನುವಾರ ಬೆಳಗ್ಗೆ 7 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಲಭ್ಯವಿರುತ್ತದೆ.

ಕರ್ನಾಟಕದಲ್ಲಿ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ರದ್ದಾಗಿದೆ. ಯಾವುದೇ ಒತ್ತಡಕ್ಕೆ ಮಣಿದು ಕರ್ಫ್ಯೂ ರದ್ದುಪಡಿ ಸುವ ನಿರ್ಧಾರ ವನ್ನು ಸರ್ಕಾರ ತೆಗೆದುಕೊಂಡಿಲ್ಲ. ತಜ್ಞರ ಅಭಿಪ್ರಾಯದಂತೆ ವೀಕೆಂಡ್ ಕರ್ಫ್ಯೂ ರದ್ದುಪಡಿಸಲಾಗಿದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದರು.

ಆಸ್ಪತ್ರೆಗೆ ಸೇರುವವರ ಸಂಖ್ಯೆ ಕಡಿಮೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದರಿಂದ ವೀಕೆಂಡ್ ಕರ್ಫ್ಯೂ ರದ್ದುಪಡಿಸಲಾಗಿದೆ. ಪಾರ್ಟಿ, ಬಾರ್‌ಗಳಲ್ಲಿ ಚಟುವಟಿಕೆ ನಿಯಂತ್ರಿಸುವ ಉದ್ದೇಶದಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ ಮುಂದುವರಿಯಲಿದೆ ಎಂದು ಅವರು ತಿಳಿಸಿದರು.

ಇನ್ನು ಹೋಟೆಲ್ ಮತ್ತು ಬಾರ್ & ರೆಸ್ಟೋರೆಂಟ್ ಮಾಲೀಕರಿಗೆ ನಿಟ್ಟುಸಿರು ಬಿಟ್ಟಂತಾಗಿದೆ. ವಾರಾಂತ್ಯದಲ್ಲಿಯೇ ಉತ್ತಮ ವ್ಯಾಪಾರವಾಗಲಿದ್ದು, ವಾರಾಂತ್ಯ ಕರ್ಫ್ಯೂ ರದ್ದುಗೊಳಿಸಿರುವುದು ಉದ್ದಿಮೆದಾರರಿಗೆ ಬಿಗ್ ರಿಲೀಫ್ ದೊರೆತಂತಾಗಿದೆ

error: Content is protected !!