Saturday, 14th December 2024

ಲೀಟರ್ ನಂದಿನಿ ಹಾಲಿನ ದರ 5 ರೂ.ಏರಿಕೆ..!

kmf

ಬೆಂಗಳೂರು: ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್ ಎದುರಾ ಗಿದ್ದು, ಲೀಟರ್ ನಂದಿನಿ ಹಾಲಿನ ದರ ವನ್ನು 5 ರೂ.ಏರಿಕೆ ಮಾಡಬೇಕು ಎಂದು ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಕೆಎಂಎಫ್ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿರುವ ಹಾಲು ಒಕ್ಕೂಟಗಳು, ನಂದಿನಿ ಹಾಲಿನ ದರ ಪರಿಷ್ಕರಣೆಗೆ 14 ಹಾಲಿನ ಒಕ್ಕೂಟಗಳು ಪಟ್ಟು ಹಿಡಿದಿದ್ದು, ಸಿಎಂ ಸಿದ್ದ ರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ.

ಜು.11 ರಂದು ನಂದಿನಿ ಹಾಲಿನ ದರವನ್ನು ಏರಿಸಲು ರಾಜ್ಯ ಸರ್ಕಾರದ ಮುಂದೆ ಬೇಡಿಕೆ ಸಲ್ಲಿಸಿರುವ ಕರ್ನಾಟಕ ಹಾಲು ಮಹಾಮಂಡಳದ ಆಡಳಿತ ಮಂಡಳಿ ಈ ಕುರಿತು ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚಿಸಿ ಅಂತಿಮ ನಿರ್ಧಾರ ಪ್ರಕಟಿಸಲಿದೆ ಎನ್ನಲಾಗಿದೆ.

ನಂದಿನಿ ಹಾಲಿನ ದರ 5 ರೂಪಾಯಿ ಏರಿಸಲು ರಾಜ್ಯ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದೇವೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳ ಲಾಗುತ್ತದೆ ಎಂದು ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಹೇಳಿದ್ದಾರೆ.

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಹಾಲಿನ ದರ ಹೆಚ್ಚಳಕ್ಕೆ ವಿವಿಧ ಹಾಲು ಒಕ್ಕೂಟಗಳಿಂದ ಕೆಎಂಎಫ್ ಮೇಲೆ ತೀವ್ರ ಒತ್ತಡವಿದ್ದು, ಈ ಹಿನ್ನೆಲೆ ಸರ್ಕಾರ ಹಾಲಿನ ದರ ಹೆಚ್ಚಳಕ್ಕೆ ನಿರ್ಧರಿಸಿದೆ ಎನ್ನಲಾಗಿದೆ.