Thursday, 19th September 2024

ಉನ್ನತ ಸ್ಥಾನಕ್ಕೇರಿದ ಅಳಿಯನಿಗೆ ಅಭಿನಂದನೆ ಸಲ್ಲಿಸಿದ ನಾರಾಯಣಮೂರ್ತಿ

ಬೆಂಗಳೂರು: ಬ್ರಿಟನ್ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ತಮ್ಮ ಅಳಿಯ ರಿಷಿ ಸುನಕ್ ಅವರನ್ನು ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅಭಿನಂದಿಸಿ ದ್ದಾರೆ.
ರಿಷಿ ಸುನಕ್ ಬಗ್ಗೆ ಹೆಮ್ಮೆಯಾಗುತ್ತಿದೆ. ಉನ್ನತ ಸ್ಥಾನಕ್ಕೇರಿ ಇತಿಹಾಸ ಸೃಷ್ಟಿಸಿದ್ದಕ್ಕೆ ಅಳಿಯ ನಿಗೆ ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದ್ದಾರೆ. ‘ರಿಷಿ ಅವರಿಗೆ ಅಭಿನಂದನೆಗಳು. ನಾವು ಅವರ ಬಗ್ಗೆ ಹೆಮ್ಮೆಪಡುತ್ತೇವೆ ಮತ್ತು ಅವರ ಯಶಸ್ಸನ್ನು ನಾವು ಬಯಸುತ್ತೇವೆ.

42 ವರ್ಷದ ರಿಷಿ ಸುನಕ್ ಅವರು ಭಾನುವಾರ ಬ್ರಿಟನ್ನ ಆಡಳಿತರೂಢ ಕನ್ಸರ್ವೇಟಿವ್ ಪಕ್ಷದ ನಾಯಕತ್ವ ಪಡೆದಿದ್ದಾರೆ. ಹೀಗಾಗಿ, ಆ ದೇಶದ ಪ್ರಧಾನಿ ಹುದ್ದೆಗೆ ಆಯ್ಕೆಯಾದ ಬಿಳಿಯನಲ್ಲದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 2009 ರಲ್ಲಿ ತಮ್ಮ ಮಗಳು ಅಕ್ಷತಾ ಮೂರ್ತಿಯನ್ನು ಮದುವೆಯಾದ ರಿಷಿ ಸುನಕ್ ಅವರನ್ನು ನಾರಾಯಣ ಮೂರ್ತಿ ಅವರ ಪತ್ನಿ ಸುಧಾ ಮೂರ್ತಿ ಕೂಡ ಅಭಿನಂದಿಸಿದ್ದಾರೆ.

ಸುನಕ್ ಅವರು ಮೂರನೇ ಪ್ರಧಾನ ಮಂತ್ರಿಯಾಗಿ ಅ.25 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.