ಸುಮಾರು 18.72 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಅವರಲ್ಲಿ 10 ಲಕ್ಷ ಅಭ್ಯರ್ಥಿಗಳು ಮಹಿಳೆಯರಿದ್ದಾರೆ. ಪರೀಕ್ಷೆಯ ಸಮಯದಲ್ಲಿ, ಅಭ್ಯರ್ಥಿಗಳು ಯಾವುದೇ ಆಭರಣಗಳನ್ನು ಧರಿಸಲು ಅನುಮತಿಸಲಾಗುವುದಿಲ್ಲ. ಪರೀಕ್ಷಾ ಕೊಠಡಿಯೊಳಗೆ ಎಲೆಕ್ಟ್ರಾನಿಕ್ ಗ್ಯಾಜೆಟ್ ಗಳನ್ನು ಕೊಂಡೊಯ್ಯಲು ಸಹ ನಿರ್ಬಂಧಗಳಿವೆ.
ಸುಗಮವಾಗಿ ಪರೀಕ್ಷೆಗಳು ನಡೆಯುವಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾ ಡುವ ದೃಷ್ಟಿಯಿಂದ ಪರೀಕ್ಷಾ ಕೇಂದ್ರದ ಸುತ್ತ ಮುತ್ತ 200 ಮೀಟರ್ ಪರಿಧಿ ವ್ಯಾಪ್ತಿ ಪ್ರದೇಶವನ್ನು ಸಾರ್ವಜನಿಕ ನಿಷೇಧಿತ ಪ್ರದೇಶವೆಂದು ಹಾಗೂ ಜೆರಾಕ್ಸ್, ಸೈಬರ್ ಕೆಫೆ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಸೂಚನೆ ನೀಡಲಾಗಿದೆ.
ಪರೀಕ್ಷಾ ಪತ್ರಿಕೆಯು ಇಂಗ್ಲಿಷ್, ಹಿಂದಿ ಮತ್ತು ಪ್ರಾದೇಶಿಕ ಭಾಷೆಯಲ್ಲಿರುತ್ತದೆ ಮತ್ತು ತಪ್ಪು ಉತ್ತರಗಳಿಗೆ 1 ಅಂಕದ ಋಣಾತ್ಮಕ ಗುರುತು ಇರುತ್ತದೆ.