Friday, 13th December 2024

ಈ ವರ್ಷವೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ: ಸಚಿವ ಬಿ ಸಿ ನಾಗೇಶ್‌

ಬೆಂಗಳೂರು: ರಾಜ್ಯದಲ್ಲಿ ಈ ವರ್ಷವೇ ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ನಾಗೇಶ್‌, ಭಾರತೀಯ ಶಿಕ್ಷಣ ಪದ್ಧತಿಯಲ್ಲಿ ಮತ್ತು ಮಾತೃ ಭಾಷೆಯಲ್ಲಿ ಶಿಕ್ಷಣ ಕೊಡಬೇಕೆಂಬುದು ಪ್ರಧಾನಿ ಮೋದಿಯವರ ಮಹಾದಾಸೆ. ಹೀಗಾಗಿ ಅವರ ಮಹಾತ್ವಾಕಾಂಕ್ಷೆಯಂತೆ ನೂತನ ಶಿಕ್ಷಣ ನೀತಿ ರೂಪಿಸಲಾಗಿದೆ. ಈ ವರ್ಷವೇ ಪ್ರಾಥಮಿಕ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯಕ್ರಮ ರೂಪಿಸಲು ಕೇಂದ್ರ ಸರ್ಕಾರ ಗಮನ ಹರಿಸುತ್ತಿದೆ ಎಂದು ತಿಳಿಸಿದ್ದಾರೆ.