Saturday, 27th July 2024

ಜು.11 ರಂದು ರಾಜ್ಯಪಾಲ ಗೆಹ್ಲೋಟ್ ಪ್ರಮಾಣವಚನ

ಬೆಂಗಳೂರು: ರಾಜ್ಯದ ನೂತನ ರಾಜ್ಯಪಾಲರಾಗಿ ನೇಮಕವಾಗಿರುವ ಥಾವರ್ ಚಂದ್ ಗೆಹ್ಲೋಟ್ ಅವರು ಜು.11 ರಂದು ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಗೆಹ್ಲೋಟ್ ಅವರು ರಾಜ್ಯದ 19 ನೇ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ರಾಜಭವನದ ಗಾಜಿನ ಮನೆಯಲ್ಲಿ ನೂತನ ರಾಜ್ಯಪಾಲರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ನೂತನ ರಾಜ್ಯಪಾಲರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣವಚನ ಬೋಧಿಸಲಿದ್ದಾರೆ.

ರಾಜ್ಯಪಾಲ ವಜೂಬಾಯಿ ವಾಲಾ ಅವರು 6 ವರ್ಷ 10 ತಿಂಗಳು ಕರ್ನಾಟಕ ರಾಜ್ಯದ ರಾಜ್ಯಪಾಲರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇದೀಗ ವಜೂಬಾಯಿ ವಾಲಾ ಅವರ ಸ್ಥಾನಕ್ಕೆ ಥಾವರ್ ಚಂದ್ ಗೆಹ್ಲೋಟ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆದೇಶ ಮಾಡಿದ್ದಾರೆ.

ರಾಜ್ಯಸಭೆಯ ಸದಸ್ಯರಾಗಿದ್ದ ಥಾವರ್ ಚಂದ್ ಗೆಹ್ಲೋಟ್ ಅವರು ಕೇಂದ್ರ ಎನ್‌ಡಿಎ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಂಪುಟ ಸಚಿವರಾಗಿದ್ದರು.

Leave a Reply

Your email address will not be published. Required fields are marked *

error: Content is protected !!