Friday, 12th April 2024

ನೂತನ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಲೋಕಾಯುಕ್ತರಾಗಿ ನೇಮಕಗೊಂಡಿರುವ ನ್ಯಾಯಾಮೂರ್ತಿ ಬಿ.ಎಸ್. ಪಾಟೀಲ್ ಅವರು ಪ್ರಮಾಣ ವಚನ ಸ್ವೀಕರಿಸಿ ದರು. ಇದಕ್ಕೂ ಮೊದಲು ಉಪ ಲೋಕಾಯುಕ್ತರಾಗಿ ಸೇವೆ ಸಲ್ಲಿಸು ತ್ತಿದ್ದರು.

ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧನೆ ಮಾಡಿದರು.

ಲೋಕಾಯುಕ್ತರಾಗಿದ್ದ ನ್ಯಾಯಾಮೂರ್ತಿ ಪಿ.ವಿಶ್ವನಾಥ ಶೆಟ್ಟಿ 2022ರ ಜನವರಿ 27ರಂದು ನಿವೃತ್ತರಾಗಿದ್ದರು. ಅಂದಿನಿಂದ ಖಾಲಿ ಇದ್ದ ಹುದ್ದೆಗೆ 2019ರ ನವೆಂಬರ್ ಉಪ ಲೋಕಾಯುಕ್ತರಾಗಿ ಸೇವೆ ಸಲ್ಲಿಸುತ್ತಿರುವ ನ್ಯಾ. ಬಿ.ಎಸ್. ಪಾಟೀಲ್. ಅವರನ್ನು ನೂತನ ಲೋಕಾಯುಕ್ತರಾಗಿ ನೇಮಕ ಮಾಡಲಾಗಿದೆ

ರಾಜ್ಯದ ನೂತನ ಲೋಕಾಯುಕ್ತರಾಗಿ ನೇಮಕಗೊಂಡ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು.

error: Content is protected !!