Thursday, 28th March 2024

ಜನವರಿ 1ರಿಂದ ಶಾಲೆಗಳ ಆರಂಭ ನಿಶ್ಚಿತ: ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್

ಬೆಂಗಳೂರು: ಈ ಮೊದಲೇ ನಿಗದಿಯಂತೆ ಜನವರಿ 1ರಿಂದ ಶಾಲೆಗಳು ಆರಂಭವಾಗಲಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ರೂಪಾಂತರಗೊಂಡ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಹೇರಿಕೆ ಕುರಿತು ಚರ್ಚೆ ನಡೆದಿರುವ ಹಿನ್ನೆಲೆ ಯಲ್ಲಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ತಾಂತ್ರಿಕ ಸಮಿತಿ ಜೊತೆ ಚರ್ಚಿಸಿದ್ದೇವೆ. ಹೊಸ ಪ್ರಭೇದದ ಕೊರೊನಾ ಅಪಾಯ ಕಾರಿಯಲ್ಲ. ಇದನ್ನು ಎದುರಿಸುವ ಶಕ್ತಿ ನಮ್ಮಲ್ಲಿ ಇದೆ ಎಂದು ಸ್ಪಷ್ಟಪಡಿಸಿದರು. ಜನವರಿ 1ರಿಂದ ಎಸ್ ಎಸ್ ಎಲ್ ಮತ್ತು ಪಿಯುಸಿ ತರಗತಿಗಳು ಆರಂಭವಾಗಲಿದ್ದು, ತಾಂತ್ರಿಕ ಸಮಿತಿ ಸಲಹೆ ಪಡೆದು ಮುಂದು ವರಿಯಲಿದೆ ಎಂದು ಸುರೇಶ್ ಕುಮಾರ್ ಹೇಳಿದರು.

ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಎಲ್ಲ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುತ್ತಿದೆ. ಲಭ್ಯವಾಗುವ ಸೀಮಿತ ಅವಧಿಯ ಹಿನ್ನೆಲೆ ಮಾರ್ಚ್ 2021ರಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಪರೀಕ್ಷೆಗಳು ನಡೆಯುವುದಿಲ್ಲ ಎಂದು ಖಚಿತ ಪಡಿಸಿದ್ದಾರೆ.

ಮಕ್ಕಳಿಗೆ ಹೊರೆಯಾಗದ ರೀತಿ ಪಠ್ಯಕ್ರಮವನ್ನು ಅಂತಿಮ ಗೊಳಿಸಲಾಗುತ್ತದೆ. ವಿಶೇಷವಾಗಿ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ಹಿರಿಯ ತರಗತಿಗಳ ವಿದ್ಯಾರ್ಥಿಗಳ ಕಲಿಕೆಯ ಅವಶ್ಯಕತೆಗಳನ್ನು ಸಹ ಗಮನದಲ್ಲಿಟ್ಟುಕೊಂಡು ಕೆಲವೇ ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ವಿದ್ಯಾಗಮ ಕಾರ್ಯಕ್ರಮವನ್ನು ಖಾಸಗಿ ಶಾಲೆಗಳು ಸಹ ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿರುವ ಸಚಿವರು, ಖಾಸಗಿ ಶಾಲೆಗಳ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಮುಕ್ತ ನಿಲುವನ್ನು ಹೊಂದಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!