Friday, 13th December 2024

ಈ ಬಾರಿಯ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇರಲ್ಲ: ಆರ್.ಅಶೋಕ್

ಬೆಂಗಳೂರು : ರಾಜ್ಯದಲ್ಲಿ ಈ ಬಾರಿಯ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇರಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಹಿಂದಿನಂತೆ ಗಣೇಶ ಹಬ್ಬ ಆಚರಣೆಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚೆ ನಡೆಸಿದ್ದೇನೆ. ಪರಿಸರ ಗಣೇಶ ಕೂರಿಸ ಬೇಕು ಎಂದು ಹೇಳಿದ್ದಾರೆ.

ಕೋವಿಡ್ ವೇಳೆ ವಾರ್ಡ್ ಗೆ ಒಂದು ಗಣಪತಿ ಎಂದು ನಿರ್ಬಂಧ ಹೇರಲಾಗಿತ್ತು. ಈ ಹಿಂದೆ ಗಣೇಶ ಹಬ್ಬ ಆಚರಣೆಗೆ ನಿರ್ಬಂಧ ವಿಧಿಸಲಾಗಿತ್ತು. ಈ ಬಾರಿ ಗಣೇಶ ಹಬ್ಬಕ್ಕೆ ಯಾವುದೇ ನಿರ್ಬಂಧ ಇರಲ್ಲ ಎಂದು ತಿಳಿಸಿದ್ದಾರೆ.