Thursday, 12th December 2024

ಬ್ಯಾಗ್ ರಹಿತ ದಿನಾಚರಣೆಗೆ ಇಂದಿನಿಂದ ಚಾಲನೆ

ಬೆಂಗಳೂರು: ಶನಿವಾರ ಶಾಲಾ ಮಕ್ಕಳಿಗೆ ಬ್ಯಾಗ್ ರಹಿತ ದಿನಾಚರಣೆ(NoBagDay) ಗೆ ಇಂದಿನಿಂದ ಚಾಲನೆ ಸಿಕ್ಕಿದೆ.

ರಾಜ್ಯದ ಶಾಲಾ ಮಕ್ಕಳಿಗೆ ಸಂತಸದಾಯಕ ಕಲಿಕೆ ನೀಡಲು ಹಾಗೂ ಮಕ್ಕಳಿಗೆ ಪಠ್ಯ ವನ್ನು ಹೊರೆಯಾಗಿಸದೇ ಉಲ್ಲಾಸದಿಂದ ಕಲಿಯುವಂತೆ ಮಾಡುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ಶನಿವಾರ ಬ್ಯಾಗ್ ರಹಿತ ದಿನವೆಂದು ಆಚರಿಸುವಂತೆ ಆದೇಶಿಸ ಲಾಗಿದೆ.

2023-24 ನೇ ಸಾಲಿನಲ್ಲಿ ಪ್ರತಿ ತಿಂಗಳು 3 ನೇ ಶನಿವಾರ ಶಾಲಾ ಹಂತದಲ್ಲಿ ಸದರಿ ಚಟು ವಟಿಕೆಗಳನ್ನು ಹಮ್ಮಿಕೊಳ್ಳಲು ತಿಳಿಸ ಲಾಗಿದ್ದು, ಮಕ್ಕಳನ್ನು ಬಹುಮುಖ ಚಟುವಟಿಕೆ ಗಳಲ್ಲಿ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆಯನ್ನು ಬೆಳೆಸಲು ವಿವಿಧ ವಿಷಯ ಗಳಲ್ಲಿ ವಿದ್ಯಾರ್ಥಿಗಳಿಗಾಗಿ 10 ಸ್ವಯಂ ವಿವರಣಾತ್ಮಕ ಮಾಡ್ಯೂಲ್ ಗಳನ್ನು ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿ ಗಳನ್ನು ಸಿದ್ದಪಡಿಸಲಾಗಿದೆ.

ಸಂಭ್ರಮ ಶನಿವಾರ (celebrationSaturday) ದಿನದಂದು ಜಿಲ್ಲಾ ಹಂತ ಮತ್ತು ಬ್ಲಾಕ್ ಹಂತದ ಎಲ್ಲಾ ಅಧಿಕಾರಿ ಗಳು ಹಾಗೂ ಸಿಆರ್ ಪಿಗಳು ಕಡ್ಡಾಯ ವಾಗಿ ಶಾಲೆಗಳಿಗೆ ಭೇಟಿ ನೀಡಿ ಅನುಪಾಲಿಸು ವುದು ಹಾಗೂ ಅಗತ್ಯ ಮಾರ್ಗದರ್ಶನ ನೀಡುವುದು ಕಾರ್ಯಕ್ರಮದ ಯಶಸ್ಸಿಗೆ ಪಾಲ್ಗೊಳ್ಳಬೇಕು ಎಂದು ಸೂಚನೆ ನೀಡಿದೆ.