Sunday, 15th December 2024

ಏಪ್ರಿಲ್ 19 ರಂದು ನಾಮಪತ್ರ ಸಲ್ಲಿಸುತ್ತೇನೆ: ಬಿ.ವೈ.ವಿಜಯೇಂದ್ರ

ಬೆಂಗಳೂರು : ಶಿಕಾರಿಪುರ ವಿಧಾನಸಭೆ ಕ್ಷೇತ್ರದಿಂದ ಏಪ್ರಿಲ್ 19 ರಂದು ನಾಮಪತ್ರ ಸಲ್ಲಿಸುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ವರುಣ ಸೇರಿದಂತೆ ಪಕ್ಷದ ವರಿಷ್ಠರು ಎಲ್ಲಿ ಹೇಳುತ್ತಾರೋ ಅಲ್ಲಿ ಹೋಗಿ ಪ್ರಚಾರ ಮಾಡುತ್ತೇನೆ. ಏ.19 ರಂದು ಶಿಕಾರಿಪುರ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಎಂಬ ಕಾರಣಕ್ಕೆ ಬಿಜೆಪಿ ಟಿಕೆಟ್ ನೀಡಲಾಗಿದೆ ಎನ್ನುವ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಬಿ.ವೈ. ವಿಜಯೇಂದ್ರ, ಯಡಿಯೂರಪ್ಪ ಮಗ ಎಂದು ಟಿಕೆಟ್ ನೀಡಿದ್ದಾರೆ ಎಂದು ಅನಿಸಲ್ಲ. ಇಂತಹ ಪರಿಪಾಠ ನಮ್ಮ ಪಕ್ಷದಲ್ಲಿ ಇಲ್ಲ ಎಂದರು.