Sunday, 8th September 2024

ಮುರುಘಾ ಶ್ರೀಗಳ ಜಾಮೀನು ರಹಿತ ಬಂಧನ ವಾರೆಂಟ್ ಗೆ ತಡೆ, ಬಿಡುಗಡೆಗೆ ಆದೇಶ

ಬೆಂಗಳೂರು: ಚಿತ್ರದುರ್ಗದ ಮುರುಘಾ ಶ್ರೀಗಳ ಜಾಮೀನು ರಹಿತ ಬಂಧನ ವಾರೆಂಟ್ ಗೆ ಹೈಕೋರ್ಟ್ ತಡೆ ನೀಡಿದೆ.

ನ.16ರಂದು 1ನೇ ಪೋಕ್ಸೊ ಮೊದಲನೇ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ಹೈಕೋರ್ಟ್ ಶರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು.

ಈ ಜಾಮೀನಿನ ಮೇಲೆ ಬಿಡುಗಡೆ ಕೂಡ ಆಗಿದ್ದರು. ಆದರೆ 2ನೇ ಪೋಕ್ಸೊ ಪ್ರಕರಣದಲ್ಲಿ ಜಾಮೀನು ಪಡೆತುವ ಮುನ್ನವೇ ಬಿಡುಗಡೆ ಆಗಿದ್ದ ಕಾರಣ, ಅವರನ್ನು ಮತ್ತೆ ಬಂಧಿಸಲಾಗಿತ್ತು. ಇದೀಗ ಅವರನ್ನು ಡಿ.2ರವೆರಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಚಿತ್ರದುರ್ಗದ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾ ಲಯ ಆದೇಶಿಸಿತ್ತು. ಜಿಲ್ಲಾ ನ್ಯಾಯಾಲಯದ ಈ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದ್ದು, ಅವರನ್ನು ಬಿಡುಗಡೆ ಮಾಡುವಂತೆಯೂ ಸೂಚಿಸಿದೆ.

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಕಳೆದ 14 ತಿಂಗಳುಗಳ ಕಾಲ ಜೈಲು ಸೇರಿದ್ದರು. ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿ ಬಂಧನದಲ್ಲಿದ್ದಂತ ಅವರಿಗೆ ಕೆಲ ದಿನಗಳ ಹಿಂದಷ್ಟೇ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿತ್ತು. ಆ ಜಾಮೀನಿನ ಮೇಲೆ ಬಿಡುಗಡೆ ಕೂಡ ಆಗಿದ್ದರು.

ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಮುರುಘಾ ಶ್ರೀಗಳು 2ನೇ ಪೋಕ್ಸೊ ಪ್ರಕರಣದಲ್ಲಿ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯಕ್ಕೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಆದರೆ ಈ ಆದೇಶವನ್ನು ಪಾಲಿಸದೇ ವೀಡಿಯೋ ಕಾನ್ಫೆರೆನ್ಸ್ ಮೂಲಕ ಹಾಜರಾಗಿದ್ದರು. ಇದನ್ನು ಸರ್ಕಾರಿ ವಕೀಲರು ಪ್ರಶ್ನಿಸಿದ್ದರು. ಜೊತೆಗೆ ಆದೇಶ ಉಲ್ಲಂಘನೆ ಸಂಬಂಧ ಅವರ ವಿರುದ್ಧ ಕಾನೂನು ಕ್ರಮಕ್ಕೆ ಮನವಿ ಮಾಡಿದ್ದರು.

ಸರ್ಕಾರಿ ವಕೀಲರ ಆಕ್ಷೇಪದ ಬಳಿಕ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು ಮುರುಘಾ ಶ್ರೀ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ ಗೊಳಿಸಿದೆ. ಈ ಹಿನ್ನಲೆಯಲ್ಲಿ  ದಾವಣಗೆರೆಯ ವಿರಕ್ತ ಮಠಕ್ಕೆ ತೆರಳಿದ ಚಿತ್ರದುರ್ಗ ಜಿಲ್ಲೆಯ ಗ್ರಾಮಾಂತರ ಠಾಣೆಯ ಪೊಲೀಸರು, ಮುರುಘಾ ಶ್ರೀಗಳನ್ನು 2ನೇ ಪೊಕ್ಸೊ ಪ್ರಕರಣದಲ್ಲಿ ಬಂಧಿಸಿದ್ದರು.

ಬಳಿಕ ಚಿತ್ರದುರ್ಗ 2ನೇ ಜಿಲ್ಲಾ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಮೂರ್ತಿಗಳು ಡಿಸೆಂಬರ್.2ರವರೆಗೆ ಮುರುಘಾ ಶ್ರೀಗಳನ್ನು 2ನೇ ಪೋಕ್ಸೊ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದರು.

Leave a Reply

Your email address will not be published. Required fields are marked *

error: Content is protected !!