ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರಕ್ಕೆ ಆಗ್ರಹಿಸಿ ಜೂ.27ರಂದು ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳು ಹೇಳಿದ್ದಾರೆ.
ಪಂಚಮಸಾಲಿ ಲಿಂಗಾಯತರಿಗೆ 2ಎ ಮೀಸಲಾತಿ ನೀಡಬೇಕೆಂಬ ಬೇಡಿಕೆ ಈಡೇರಿಕೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಜೂ.27 ರಂದು ಶಿಗ್ಗಾಂವಿನಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಹೇಳಿದ್ದಾರೆ.
2021ರ ವಿಧಾನಮಂಡಲ ಅಧಿವೇಶನದಲ್ಲಿ ಭರವಸೆ ನೀಡಿದಂತೆ ಸರ್ಕಾರ ತಮ್ಮ ಬೇಡಿಕೆ ಈವರೆಗೂ ಈಡೇರಿಸಿಲ್ಲ. ಹೀಗಾಗಿ ಶಿಗ್ಗಾಂವಿಯ ಸಿಎಂ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಿ ಮನೆಗೆ ಬೀಗ ಹಾಕಲಾಗುವುದು ಎಂದು ಹೇಳಿದ್ದಾರೆ.