Sunday, 19th May 2024

ಡಿ.6 ರಂದು ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ

ಲಾ ಕಾಲೇಜ್​​ ಕಟ್ಟಡ ಹಾಗೂ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕಟ್ಟಡ ಉದ್ಘಾಟನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್ 6 ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಜ್ಞಾನಭಾರತಿ ಕ್ಯಾಂಪಸ್​ನಲ್ಲಿ ನಿರ್ಮಿಸಿರುವ ಲಾ ಕಾಲೇಜ್​​ ಕಟ್ಟಡ ಹಾಗೂ, ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕಟ್ಟಡ ಉದ್ಘಾಟಿಸಲಿದ್ದಾರೆ.

ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನೂತನ ಕಟ್ಟಡ ಉದ್ಘಾಟನೆ ಹಿನ್ನೆಲೆಯಲ್ಲಿ ಡಿಸೆಂಬರ್​ 6 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವರಾದ ಅಶ್ವಥ್ ನಾರಾಯಣ್ ಹಾಗೂ ವಿ.ಸೋಮಣ್ಣ, ಜ್ಞಾನಭಾರತಿ ಕ್ಯಾಂಪಸ್​ನಲ್ಲಿ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕಾರ್ಯಕ್ರಮದ ಪೂರ್ವಬಾವಿ ತಯಾರಿ ವೀಕ್ಷಿಸಿದ್ದಾರೆ.

ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರಕ್ಕೆ ಪ್ರಧಾನಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ಮಾಡಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಂದಿನ ತಿಂಗಳು ಬೆಂಗಳೂರಿನ ಬಡವರಿಗೆ ವಸತಿ ಯೋಜನೆ ಉದ್ಘಾಟಿಸ ಲಿದ್ದಾರೆ.

ಇತ್ತೀಚೆಗೆ ದೆಹಲಿಯಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಹುಕಾಲದಿಂದ ಬಾಕಿ ಉಳಿದಿರುವ ಉಪನಗರ ರೈಲು ಯೋಜನೆ ಸೇರಿದಂತೆ ಹಲವು ಯೋಜನೆಗಳಿಗೆ ಚಾಲನೆ ನೀಡಲು ಡಿಸೆಂಬರ್‌ನಲ್ಲಿ ಬೆಂಗಳೂರಿಗೆ ಆಹ್ವಾನಿಸಿದ್ದರು.

ಮುಂದಿನ ಹದಿನೈದು ದಿನಗಳಲ್ಲಿ ಸುಮಾರು 4,000 ಮನೆಗಳು ಪೂರ್ಣಗೊಳ್ಳಲಿವೆ ಎಂದು ವಸತಿ ಇಲಾಖೆ ಮೂಲಗಳು ತಿಳಿಸಿವೆ.

error: Content is protected !!