Thursday, 19th September 2024

Narendra Modi Birthday: ಮೋದಿ ಜನ್ಮದಿನ; ಬಿಜೆಪಿಯಿಂದ ಚಿತ್ರಕಲಾ, ರಂಗೋಲಿ ಶಿಬಿರ

Narendra Modi Birthday

ಬೆಂಗಳೂರು: ಭಾರತೀಯ ಜನತಾ ಪಕ್ಷದ (BJP) ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠದ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ (Narendra Modi Birthday) ಪ್ರಯುಕ್ತ ಇಂದು ಚಿತ್ರಕಲಾ ಮತ್ತು ರಂಗೋಲಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಚಿತ್ರಕಲಾ ಮತ್ತು ರಂಗೋಲಿ ಶಿಬಿರಕ್ಕೆ ಚಾಲನೆ ನೀಡಲಾಯಿತು.

ಈ ಸುದ್ದಿಯನ್ನೂ ಓದಿ | Virat Kohli: ದ್ರಾವಿಡ್‌ ದಾಖಲೆ ಮೇಲೆ ಕಣ್ಣಿಟ್ಟ ಕಿಂಗ್‌ ಕೊಹ್ಲಿ

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ, ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರೀ, ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠದ ರಾಜ್ಯ ಸಂಚಾಲಕಿ ರೂಪ ಅಯ್ಯರ್, ಸಹ-ಸಂಚಾಲಕ ಎಚ್.ಎ. ಆತ್ಮಾನಂದ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ರಾಜ್ಯ ಸಹ-ಕಾರ್ಯಾಲಯ ಕಾರ್ಯದರ್ಶಿ ವಿಶ್ವನಾಥ್ ಅಣಜಿ, ಪ್ರಮುಖರು ಮತ್ತು ಕಲಾವಿದರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *