Sunday, 12th May 2024

ನ.20ರಂದು ಪೊಲೀಸ್ ಆಯುಕ್ತ ಕಮಲ್‍ಪಂತ್ ಜನಸಂಪರ್ಕ ಸಭೆ

ಬೆಂಗಳೂರು: ನಗರ ಪೊಲೀಸ್ ಆಯುಕ್ತ ಕಮಲ್‍ಪಂತ್ ಅವರು ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ನೀಡಿದ್ದ ಭರವಸೆ ಯಂತೆ ಮಾಸಿಕ ಜನಸಂಪರ್ಕ ಸಭೆ ನಡೆಸಲು ಮುಂದಾಗಿದ್ದಾರೆ.

ತಿಂಗಳ ನಾಲ್ಕನೇ ಶನಿವಾರದ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೂ ನಗರಾದ್ಯಂತ ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಅಥವಾ ಯಾವುದೇ ಮಾಹಿತಿ ಪಡೆಯಲು ಪೊಲೀಸ್ ಠಾಣೆಗೆ ಭೇಟಿ ನೀಡಬಹುದೆಂದು ಆಯುಕ್ತರು ತಿಳಿಸಿದ್ದಾರೆ.

ಪಂತ್ ಅವರು ನಗರ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳುವ ಸಂದರ್ಭದಲ್ಲಿ ಮಾತನಾಡುತ್ತಾ, ಕಾಲಕಾಲಕ್ಕೆ ಜನ ಸಂಪರ್ಕ ಸಭೆಗಳನ್ನು ನಡೆಸಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಿದ್ದರು.

 

Leave a Reply

Your email address will not be published. Required fields are marked *

error: Content is protected !!