Sunday, 15th December 2024

ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ ನಡೆಸಲು ಸಾಧ್ಯವಿಲ್ಲ

si exam

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಧ ಹೆಸರಿರುವ ಕಳಂಕಿತ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಗೆ ಸರ್ಕಾರ ಮಾಹಿತಿ ನೀಡಿದೆ.

ಅಕ್ರಮ ನಡೆದ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ ಲಿಖಿತ ಪರೀಕ್ಷೆ ರದ್ದುಪಡಿಸಿ ಮರು ಪರೀಕ್ಷೆ ನಡೆಸಲು ಸರ್ಕಾರ ಹೊರಡಿಸಿದ ಆದೇಶ ರದ್ದುಪಡಿಸಬೇಕೆಂದು ಕೋರಿ ಆಯ್ಕೆ ಯಾಗಿದ್ದ ನೂರಕ್ಕೂ ಅಧಿಕ ಅಭ್ಯರ್ಥಿಗಳು ಹೈಕೋರ್ಟ್ ಗೆ ಆಯ್ಕೆ ಅರ್ಜಿ ಸಲ್ಲಿಸಿದ್ದು, ನ್ಯಾಯಮೂರ್ತಿಜಿ ಜಿ.ನರೇಂದರ್ ನೇತೃತ್ವದ ವಿಭಾಗಿಯ ಪೀಠದಲ್ಲಿ ಬುಧವಾರ ವಿಚಾರಣೆ ನಡೆದಿದೆ.

ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು, ಪಿಎಸ್‌ಐ ಪರೀಕ್ಷೆಯಲ್ಲಿ ಉತ್ತೀರ್ಣ ರಾದವರಲ್ಲಿ ದೋಷಾರೋಪ ಪಟ್ಟಿಯಲ್ಲಿ ಹೆಸರಿಸಿದ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದವರಿಗೆ ಮರು ಪರೀಕ್ಷೆ ನಡೆಸಲು ಸಾಧ್ಯವಿಲ್ಲ. ಸರ್ಕಾರದ ಮಟ್ಟದಲ್ಲಿ ಈ ಸಂಬಂಧ ಚರ್ಚೆ ನಡೆದು, ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತಿದೆ. ಯಾವ ಕಾರಣಕ್ಕೆ ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂಬುದರ ಬಗ್ಗೆ ವರದಿಯಲ್ಲಿ ತಿಳಿಸಲಾಗಿದೆ ಎಂದು ಹೇಳಿದ್ದಾರೆ.

ಜುಲೈ 10ರಂದು ಮಧ್ಯಾಹ್ನ ವಿಚಾರಣೆ ನಡೆಸುವುದಾಗಿ ಕೋರ್ಟ್ ಹೇಳಿದೆ. ಎಲ್ಲಾ ಪಕ್ಷಗಾರರ ಪರ ವಕೀಲರಿಗೆ ಲಿಖಿತ ವಾದಾಂಶ ಸಲ್ಲಿಸಲು ಸೂಚನೆ ನೀಡಿದೆ.