Tuesday, 17th September 2024

ಶಾಲಾ ವಿದ್ಯಾರ್ಥಿಗಳಿಗೆ ಡಿಸೆಂಬರ್’ನಿಂದ ರಾಗಿ ಮಾಲ್ಟ್ ವಿತರಣೆ

ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಅಪೌಷ್ಠಿಕತೆ ನಿವಾರಿಸುವ ನಿಟ್ಟಿನಲ್ಲಿ ಡಿಸೆಂಬರ್ ನಿಂದ ಒಂದು ಲೋಟ ರಾಗಿ ಮಾಲ್ಟ್ ವಿತರಿಸಲು ನಿರ್ಧರಿಸಿದೆ.

ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ಮಾತನಾಡಿ, ರಾಜ್ಯದ ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆಗೆ ವಾರದಲ್ಲಿ 2 ದಿನ ಮೊಟ್ಟ, ಚಿಕ್ಕಿ-ಬಾಳೆಹಣ್ಣು ನೀಡಲಾಗುತ್ತಿದೆ. ಇದಲ್ಲದೇ, ಡಿಸೆಂಬರ್ ನಿಂದ ಒಂದು ಲೋಟ ರಾಗಿ ಮಾಲ್ಟ್ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಮಧ್ಯಾಹ್ನದ ಬಿಸಿಯೂಟ ಯೋಜನೆ ಅನೇಕ ವರ್ಷಗಳಿಂದ ಉತ್ತಮವಾಗಿ ನಡೆಯುತ್ತಾ ಬಂದಿದೆ. ಊಟದ ಜೊತೆಗೆ ಮಕ್ಕಳಲ್ಲಿ ಅಪೌಷ್ಠಿಕತೆ ತಡೆಯುವ ದೃಷ್ಟಿಯಿಂದ ವಾರದಲ್ಲಿ ಎರಡು ದಿನ ಮೊಟ್ಟೆ, ಮೊಟ್ಟೆ ಸೇವಿಸದವರಿಗೆ ಚಿಕ್ಕಿ, ಬಾಳೆಹಣ್ಣು ನೀಡಲಾಗುತ್ತಿದೆ. ಡಿಸೆಂಬರ್ ನಲ್ಲಿ ಇದರ ಜೊತೆಗೆ ರಾಗಿ ಮಾಲ್ಟ್ ನೀಡಲು ತೀರ್ಮಾನಿಸಲಾಗಿದೆ ಎಂದರು.

ಮಳೆಗಾಲ ಮುಕ್ತಾಯವಾಗಿ ಬಿಸಿಲ ತಾಪ ದಿನೇ ದಿನೇ ಹೆಚ್ಚಾಗುತ್ತಿದೆ. ಇಂತಹ ಸಮಯದಲ್ಲಿ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಹಾಗೂ ಪೌಷ್ಟಿಕ ಆಹಾರ ನೀಡುವ ದೃಷ್ಟಿಯಿಂದ ರಾಗಿ ಮಾಲ್ಟ್ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. ಎನ್ ಜಿಓ ಒಂದರ ಮೂಲಕ ಎರಡು ಜಿಲ್ಲೆಗಳಲ್ಲಿ ಪ್ರಾಯೋಗಿಕ ವಾಗಿ ಮಕ್ಕಳಿಗೆ ರಾಗಿ ಗಂಜಿ ನೀಡಲಾಗಿತ್ತು.

Leave a Reply

Your email address will not be published. Required fields are marked *