Friday, 13th December 2024

ಜನವರಿ ಅಂತ್ಯಕ್ಕೆ ‘ರೈತ ಶಕ್ತಿ’ ಯೋಜನೆಗೆ ಚಾಲನೆ

ಬೆಂಗಳೂರು: ಬಜೆಟ್‌ನಲ್ಲಿ ಘೋಷಿಸಿದಂತೆ ‘ರೈತ ಶಕ್ತಿ’ ಯೋಜನೆಗೆ ಜನವರಿ ಅಂತ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.

ರೈತರಿಗೆ ಕೃಷಿ ಯಾಂತ್ರೀಕರಣವು ಡೀಸೆಲ್‌ ಇಂಧನದ ಮೇಲೆ ಬಹುತೇಕ ಅವಲಂಬಿತವಾ ಗಿದೆ. ಹೀಗಾಗಿ ರೈತರ ಮೇಲಿನ ಆರ್ಥಿಕ ಹೊರೆ ಆದಷ್ಟು ಕಡಿತಗೊಳಿಸುವ ನಿಟ್ಟಿನಲ್ಲಿ 2022-23ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿ ದಂತೆ ರೈತ ಶಕ್ತಿ ಯೋಜನೆ ಜಾರಿಗೆ ತರಲಾಗುತ್ತಿದೆ.

ಯಂತ್ರೋಪಕರಣಗಳನ್ನು ಪ್ರೋತ್ಸಾಹಿಸಲು ಹಾಗೂ ಇಂಧನ ವೆಚ್ಚದ ಹೊರೆ ಇಳಿಸಲು ರೈತ ಶಕ್ತಿ ಯೋಜನೆ ಜಾರಿಯಾಗಲಿದೆ.

ಪ್ರತಿ ಎಕ್ರೆ 250 ರೂ.ಗಳಂತೆ ಗರಿಷ್ಠ 5 ಎಕರೆಗೆ ಡಿ.ಬಿ.ಟಿ ಮೂಲಕ ಡೀಸೆಲ್‌ಗೆ ಸಹಾಯಧನವನ್ನು ನೀಡುವ ರೈತ ಶಕ್ತಿ ಯೋಜನೆಯಡಿ ಸಿಎಂ ಸುಮಾರು 45 ಲಕ್ಷಕ್ಕೂ ಹೆಚ್ಚಿನ ರೈತಾಪಿ ಕುಟುಂಬಗಳಿಗೆ ಡಿಬಿಟಿ ಮೂಲಕ ಸಬ್ಸಿಡಿಯನ್ನು ನೇರವಾಗಿ ರೈತರ ಖಾತೆಗೆ ಬಿಡುಗಡೆ ಮಾಡಲಿದ್ದಾ ರೆ.