Sunday, 15th December 2024

Suresh Kumar: ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಆರೋಗ್ಯದಲ್ಲಿ ಏರುಪೇರು

suresh kumar

ಬೆಂಗಳೂರು: ಮಾಜಿ ಶಿಕ್ಷಣ ಸಚಿವ ಹಾಗೂ ಹಾಲಿ ರಾಜಾಜಿನಗರ ಕ್ಷೇತ್ರದ ಬಿಜೆಪಿಯ ಶಾಸಕ ಎಸ್.ಸುರೇಶ್ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡುತ್ತಿರುವುದಾಗಿ ತಿಳಿದು ಬಂದಿದೆ.

ರಾಜಾಜಿನಗರದ ಬಿಜೆಪಿ ಶಾಸಕ ಎಸ್ ಸುರೇಶ್ ಕುಮಾರ್ ಅವರು ಮ್ಯೂಟೆಂಟ್ ಚಿಕನ್ ಗುನ್ಯಾದಿಂದ ಬಳಲುತ್ತಿದ್ದರು. ಕಳೆದ ನಾಲ್ಕು ದಿನಗಳಿಂದ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದರು. ಅವರನ್ನು ಶೇಷಾದ್ರಿಪುರಂನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೊದಲು ಐಸಿಯುನಲ್ಲಿ ಚಿಕಿತ್ಸೆ ನೀಡಿದ್ದು, ನಂತರ ವಾರ್ಡ್‌ಗೆ ಶಿಫ್ಟ್‌ ಮಾಡಲಾಗಿದೆ. ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇಂದು ಅಥವಾ ನಾಳೆ ಡಿಸ್‌ಚಾರ್ಜ್‌ ಮಾಡುವುದಾಗಿ ತಿಳಿಸಲಾಗಿದೆ.