Sunday, 15th December 2024

ಮೃತ ಅಭಿಮಾನಿಗಳ ಕುಟುಂಬಕ್ಕೆ ’ರಾಕಿಂಗ್ ಸ್ಟಾರ್’ ಹಣ ಸಹಾಯ

ಬೆಂಗಳೂರು: ಯಶ್ ಬರ್ತ್​ಡೇ ಪ್ರಯುಕ್ತ ಫ್ಲೆಕ್ಸ್ ಕಟ್ಟಲು ಹೋದ ಮೂವರು ಯುವಕರು ಕರೆಂಟ್ ಶಾಕ್ ಹೊಡೆದು ಮೃತಪಟ್ಟಿದ್ದರು. ಇದೀಗ ಮೃತ ಅಭಿಮಾನಿಗಳ ಕುಟುಂಬಕ್ಕೆ ಹಣ ಸಹಾಯವನ್ನು ಮಾಡಿದ್ದಾರೆ.

ರಾಕಿಂಗ್ ಸ್ಟಾರ್ ಅಭಿಮಾನಿಗಳ ಸಾವಿನ ನಂತರ ಸಂತ್ರಸ್ತ ಕುಟುಂಬಕ್ಕೆ ನೆರವಾಗುತ್ತೇನೆಂದು ಮಾತು ಕೊಟ್ಟಿದ್ದರು.

ಯಶ್​ ಜನ್ಮದಿನದ ಹಿನ್ನಲೆಯಲ್ಲಿ ಬ್ಯಾನರ್​ ಕಟ್ಟುವಾಗ ವಿದ್ಯುತ್​ ತಂತಿ ಸ್ಪರ್ಶಿಸಿ ಅಭಿಮಾನಿಗಳು ನಿಧನರಾದ ನೋವು ಇನ್ನೂ ಹಸಿಯಾಗಿದೆ. ಮೃತ ಅಭಿಮಾನಿಗಳಾದ ಮುರಳಿ, ನವೀನ್​ ಮತ್ತು ಹನುಮಂತ ಅವರ ಕುಟುಂಬದವರಿಗೆ ಪರಿಹಾರ ಹಣ ತಲುಪಿಸಲಾಗಿದೆ.

ಯಶ್​ ಆಪ್ತರು ಗದಗ ಜಿಲ್ಲೆಯ ಸೊರಣಗಿ ಗ್ರಾಮಕ್ಕೆ ತೆರಳಿ ಪರಿಹಾರದ ಚೆಕ್​ ನೀಡಿದ್ದಾರೆ. ಪ್ರತಿ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಚೆಕ್​ ನೀಡಲಾಗಿದೆ. ಸ್ನೇಹಿತರು ಬಂದು ಪರಿಹಾರ ಹಣ ನೀಡಿದ್ದಾಗ ಕುಟುಂಬಸ್ಥರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.